ಎನ್. ಎಸ್ .ಎಸ್ ಸಜ್ಜನರ ಸಂಪರ್ಕ ವೃದ್ಧಿಸಿಕೊಳ್ಳಲು ಸಹಕಾರಿ: ಪ್ರಭಾಕರ ಪ್ರಭು
ಬಂಟ್ವಾಳ:ವಿದ್ಯಾರ್ಥಿಗಳು ಎನ್ ಎಸ್ ಎಸ್ ಶಿಬಿರದಿಂದ ವ್ಯಕ್ತಿತ್ವ ವಿಕಸನದ ಜೊತೆಗೆ ಗುರು ಹಿರಿಯರಿಗೆ ಗೌರವ ನೀಡುವ ಸಂಸ್ಕಾರ ಮತ್ತು ಎಲ್ಲರೊಂದಿಗೆ ಸೌಹಾರ್ದತೆಯಿಂದ ಬೆರೆತು ಸಜ್ಜನರ ಸಂಪರ್ಕ ವೃದ್ಧಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಸಿದ್ಧಕಟ್ಟೆ ವ್ಯವಸಾಯಿಕ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದರು.

ಇಲ್ಲಿನ ರಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಂಟ್ವಾಳ ಎಸ್ ವಿ ಎಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಆರಂಭಗೊಂಡ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಎಸ್ ವಿ ಎಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಸುಯೋಗ ವರ್ಧನ್ ಡಿ.ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಲ್ಯದಿಂದಲೇ ಸಾಧನಾಶೀಲರಾಗಿ ಬೆಳೆಯಲು ಎಲ್ಲರಿಂದಲೂ ಸಾಧ್ಯವಿದೆ ಎಂದರು.
ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ, ಲಯನ್ಸ್ ಕ್ಲಬ್ ಸದಸ್ಯ ಅನಿಲ್ ಕುಮಾರ್ ಪ್ರಭು, ಮುಖ್ಯಶಿಕ್ಷಕಿ ಜಾನೆಟ್ ಕಾನ್ಸೆಸೊ ಶುಭ ಹಾರೈಸಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಆಚಾರ್ಯ ರಾಯಿ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ದಿನೇಶ ಶೆಟ್ಟಿ ಮಡಂದೂರು, ಸಹಶಿಕ್ಷಕಿ ಬೇಬಿ ಅರಳ, ಹಳೆವಿದ್ಯಾರ್ಥ ಸಂಘದ ಅಧ್ಯಕ್ಷ ಸಮಿತ್ ಶಿವನಗರ, ನಮ್ಮ ಜವನೆರ್ ಟ್ರಸ್ಟ್ ಅಧ್ಯಕ್ಷ ಪ್ರದೀಪ್ ಗೌಡ ಮೀಯಾಲು, ಘಟಕ ನಾಯಕ ಧನುಷ್, ನಾಯಕಿ ಪ್ರಾಜ್ಞವಿ ಮತ್ತಿತರರು ಇದ್ದರು.
ಶಿಬಿರಾಧಿಕಾರಿ ಶಶಿಧರ್ ಎಸ್. ಸ್ವಾಗತಿಸಿ, ಎಸ್ ವಿ ಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ಬಿ. ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕಿ ರೂಪಾ ಎಚ್.ಆಚಾರ್ಯ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಲಕ್ಷ್ಮೀನಾರಾಯಣ ಕೆ. ಕಾರ್ಯಕ್ರಮ ನಿರೂಪಿಸಿದರು.