Published On: Thu, Oct 3rd, 2024

ಮೈಸೂರು ದಸರಾಕ್ಕೆ ಚಾಲನೆ: ಸರ್ಕಾರ ಉರುಳಿಸುವ ಪ್ರಯತ್ನ ಬೇಡ: ಸಾಹಿತಿ ಹಂಪ ನಾಗರಾಜಯ್ಯ

ಮೈಸೂರು: ಇಂದು ಮೈಸೂರು ದಸರಾಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ಚಾಲನೆ ನೀಡಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಅವರು, ಯುವಕರು ಮೋದಿ ಮೋದಿ ಎಂದು ಮುಂದುವರಿಯುತ್ತಿದ್ದಾರೆ. ಹಾಗೆಂದು ಸರ್ಕಾರ ಅಸ್ಥಿರಗೊಳಿಸುವ ಕೆಲಸವನ್ನು ಯಾರೂ ಮಾಡಬಾರದು, ದಸರಾ ಎಂಬುದು ಮತ ಧರ್ಮಗಳ ತಾರತಮ್ಯ ಇಲ್ಲದ ಸರ್ವ ಜನಾಂಗದ ಹಬ್ಬ. ಆಸ್ತಿಕತೆ, ನಾಸ್ತಿಕತೆ ಎಂಬುದು ದಸರಾದಲ್ಲಿ ಅಪ್ರಸ್ತುತ. ದಸರಾ ಅರಮನೆ ಹಬ್ಬವಲ್ಲ, ಜನ ಆರಿಸಿದ ಸರ್ಕಾರ ನಡೆಸುವ ಹಬ್ಬ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಎಷ್ಟೇ ಅಡ್ಡಿ ಆತಂಕಗಳು ಎದುರಾಗುತ್ತಿದ್ದರೂ ಎದೆಗುಂದದೆ ಸೆಡ್ಡು ಹೊಡೆದು ಗಟ್ಟಿಯಾಗಿ ನಿಂತಿದ್ದಾರೆ. ಜೀವನವೇ ದೊಡ್ಡ ಅಖಾಡ, ಧೃತಿಗೆಡದೆ ತೊಡೆತಟ್ಟಿ ನಿಲ್ಲಲೇಬೇಕು. ಸಜ್ಜನಿಕೆ, ಸೌಮ್ಯ ಸ್ವಭಾವ ದೌರ್ಬಲ್ಯವಲ್ಲ ಎಂದರು. ಆ ಮೂಲಕ ಹಂಪ ನಾಗರಾಜಯ್ಯ ಪರೋಕ್ಷವಾಗಿ ಸಿದ್ದರಾಮಯ್ಯಗೆ ಧೈರ್ಯ ತುಂಬಿದರು. ಜತೆಗೆ, ಸಿಎಂ, ಡಿಸಿಎಂ ಒಂದು ರೀತಿಯಲ್ಲಿ ಗರಡಿ ಮನೆ ಆಳಿನಂತೆ ಜಟ್ಟಿಗಳು ಎಂದು ಹಾಡಿಹೋಗಲಿದರು.

ಇನ್ನು ಈ ವೇಳೆ ಹಂಪ ನಾಗರಾಜಯ್ಯ ಹೆಂಡತಿ ದಿ. ಕಮಲಾ‌ ಹಂಪನಾ ಅವರನ್ನು ನೆನಪಿಸಿಕೊಂಡರು. ಅವರು ಮತ್ತು ಅವರ ಪತ್ನಿಯ 88 ವರ್ಷ ನಡೆಸಿಕೊಂಡ ಬಂದ ಜೀವನದ ಬಗ್ಗೆ ನೆನಪಿಸಿದರು. 71 ವರ್ಷದ ಸ್ನೇಹದ ಸುಖ ನೀಡಿದೆ. 63 ವರ್ಷ ಮಡದಿಯಾಗಿ ಜೊತೆಯಾಗಿದ್ದೆ. ಆರು ವರ್ಷಗಳ ಕಾಲ ಸಹಪಾಠಿಯಾಗಿದ್ದೆ. ನಿನ್ನ ದಿವ್ಯ ನೆನಪಿಗೆ ಈ ಗೌರವ ಸಮರ್ಪಣೆ ಎಂದು ಹೇಳಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter