ಮಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ.

ವಿಧಾನ ಪರಿಷತ್ ನಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಕಾಂಗ್ರೆಸ್ ಪಕ್ಷ ರಾಜು ಪೂಜಾರಿಯವರಿಗೆ ಟಿಕೆಟ್ ನೀಡಿದೆ.

ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಇಂದು (ಅ. 3) ದ.ಕ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ ಮತ್ತು ಐವನ್ ಡಿಸೋಜ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಜಯಪ್ರಕಾಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *