
ಬಾಬು ಶೆಟ್ಟಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು, ಈ ಮೂಲಕ ಅಧ್ಯಕ್ಷರಾಗಿ ನೇಮಕಾವಾಗಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಸಹಾಯಕ ಆಯುಕ್ತರಾದ ಮಹೇಶ್ಚಂದ್ರ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದರು.
ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕರಾದ ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕನಾಯ್ಕ್, ಶ್ರೀಮತಿ ಧನಾಕ್ಷಿ, ಶ್ರೀಮತಿ ಸುಧಾ ಕೆ, ಕೆ. ಸುರೇಂದ್ರ ಶೆಟ್ಟಿ, ಅಭಿಲಾಷ್ ಪಿ. ವಿ, ಯು. ರಾಜೇಶ್ ಕಾರಂತ್, ರಘುರಾಮ ದೇವಾಡಿಗ ಈ ಆಯ್ಕೆ ಸಭೆಯಲ್ಲಿ ಭಾಗವಹಿಸಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿ ಸಮಿತಿ ರಚನೆ ಹಾಗೂ ಅಧ್ಯಕ್ಷ ಆಯ್ಕೆಯಲ್ಲಿ ಕಳೆದ ಒಂದು ವರ್ಷದಲ್ಲಿ ಭಾರೀ ಗೊಂದಲದಲ್ಲಿ ಇತ್ತು. ಇದೀಗ ಅದಕ್ಕೆ ತೆರೆ ಬಿದ್ದಿದೆ.
