ನಿವೃತ್ತ ಯೋಧನಿಗೆ ಸನ್ಮಾನ
ಬಂಟ್ವಾಳ:ರಾಷ್ಟ್ರ ಸೇವೆಯಲ್ಲಿ ಕರ್ತವ್ಯ ಸಲ್ಲಿಸಿ ನಿವೃತ್ತಿ ಗೊಂಡು ಕೃಷಿಯಲ್ಲಿ ತೊಡಗಿಸಿಕೊಂಡ ಸಂಘದ ಸದಸ್ಯ ಮಾಜಿ ಯೋಧರಾದ ರೋ. ಮೋಹನ್. ಜಿ. ಮೂಲ್ಯ ರವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು, ಉಪಾಧ್ಯಕ್ಷ ಸತೀಶ್ ಪೂಜಾರಿ,ಕೇಂದ್ರ ರಬ್ಬರ್ ಬೋರ್ಡ್ ಮಂಡಳಿ ಸದಸ್ಯ ವಸಂತಕುಮಾರ್ ಅಣ್ಣಾಳಿಕೆ, ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ನ ಕಾರ್ಯದರ್ಶಿ ರಾಜೇಶ್ ಶೆಟ್ಟಿ ಶೀತಲ , ಜಿಲ್ಲಾ ಕಂಬಳ ಸಮಿತಿ ಉಪಾಧ್ಯಕ್ಷರಾದ ರಶ್ಮಿತ್ ಶೆಟ್ಟಿ, ಸಂದೀಪ್ ಶೆಟ್ಟಿ ಪೊಡುಂಬ ಪ್ರಮುಖ ರಾದ ದುರ್ಗಾದಾಸ್ ಶೆಟ್ಟಿ ಮಾವಂತೂರು, ಕಿರಣ್ ಕುಮಾರ್ ಮಂಜಿಲ, ಸಂಘದ ನಿರ್ದೇಶಕರಾದ ಸಂದೇಶ ಶೆಟ್ಟಿ ಪೂಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು,ಹರೀಶ್ ಆಚಾರ್ಯ, ದಿನೇಶ್ ಪೂಜಾರಿ ಹುಲಿಮೇರು, ಉಮೇಶ್ ಗೌಡ, ದೇವರಾಜ್ ಸಾಲಿಯಾನ್, ವೀರಪ್ಪ ಪರವ, ಜಾರಪ್ಪ ನಾಯ್ಕ, ಮಾಧವ ಶೆಟ್ಟಿಗಾರ್, ಮಂದಾರತಿ.ಎಸ್.ಶೆಟ್ಟಿ, ಅರುಣಾ. ಎಸ್. ಶೆಟ್ಟಿ, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.