Published On: Sat, Oct 5th, 2024

ಬಂಟ್ವಾಳ : ಮಾಜಿ ಸೈನಿಕನೋರ್ವನ ನಗದು ಬ್ಯಾಗ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32) ಎಂಬಾತನನ್ನು ಬಂಟ್ವಾಳ ಸರಪಾಡಿಯ ಮಣಿನಾಲ್ಕೂರು ಎಂಬಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ

ನಿವೃತ್ತ ಸೈನಿಕರೋರ್ವರು ಬಿ.ಸಿ.ರೋಡಿನ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕೆಲವೇ ಸಮಯದಲ್ಲಿ ಲಕ್ಷಾಂತರ ರೂ ನಗದು ಇದ್ದ ಬ್ಯಾಗ್ ಕಳವಾದ ಘಟನೆಯೂ ಸೆಪ್ಟೆಂಬರ್ 4 ರಂದು ನಡೆದಿತ್ತು. ಈ ಘಟನೆಗೆ ಸಂಬಂಧ ಪಟ್ಟಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 147/2024 ಕಲಂ: 303(2) ಬಿಎನ್‌ಎಸ್-2023 ರಂತೆ ಪ್ರಕರಣ ದಾಖಲಾಗಿತ್ತು. ಆರೋಪಿಯ ಪತ್ತೆಗಾಗಿ ಬಂಟ್ವಾಳ ಉಪ-ವಿಭಾಗದ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಆರೋಪಿಯನ್ನು ಬಂಧಿಸಿದ್ದು, 80,000 ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್, ಐಪಿಎಸ್ ರವರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರರವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಡಿವೈಎಸ್.ಪಿ ಎಸ್. ವಿಜಯಪ್ರಸಾದ್ ರವರ ನೇತೃತ್ವದ, ಗ್ರಾಮಾಂತರ ಎಸ್.ಐ. ಹರೀಶ್ ಎಂ.ಆರ್, ಪಿ.ಎಸ್. ಐ. ರವರ ವಿಶೇಷ ಪತ್ತೆ ತಂಡವನ್ನು ರಚಿಸಲಾಗಿತ್ತು.

ಈ ತನಿಖಾ ತಂಡದಲ್ಲಿ ಹೆಚ್ ಸಿ ಹರಿಶ್ಚಂದ್ರ, ಹೆಚ್ ಸಿ ರಾಧಾಕೃಷ್ಣ, ಪಿಸಿಗಳಾದ ಬಸವರಾಜ ಎಚ್.ಕೆ, ಕುಮಾರ್ ಎಚ್.ಕೆ, ಅಶೋಕ ಮತ್ತು ರಂಜಾನ್ ರವರುಗಳು ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದು ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter