ಬಂಟ್ವಾಳ: ಭೂ ಬ್ಯಾಂಕ್ ನಲ್ಲಿ 10 ದಿನಗಳ ಆಧಾರ್ ಶಿಬಿರಕ್ಕೆ ಚಾಲನೆ
ಬಂಟ್ವಾಳ: ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃಧ್ಧಿ ಬ್ಯಾಂಕ್ ನ ಅಶ್ರಯದಲ್ಲಿ ಆಧಾರ್ ಸೇವಾ ಕೇಂದ್ರ ಮಂಗಳೂರು ವತಿಯಿಂದ ಅ. 14 ರವರೆಗೆ 10 ದಿನಗಳ ಕಾಲ ನಡೆಯುವ ಆಧಾರ್ ಶಿಬಿರಕ್ಕೆ ಚಾಲನೆನೀಡಲಾಯಿತು.
ಬ್ಯಾಂಕ್ ಕಟ್ಟಡದಲ್ಲಿ ಆರಂಭಗೊಂಡ ಈ ಶಿಬಿರವನ್ನು ಬ್ಯಾಂಕಿನ ಅಧ್ಯಕ್ಷ ಅರುಣ್ ರೋಷನ್ ಡಿಸೋಜ ಅವರು ಶಿಬಿರವನ್ನು ಉದ್ಘಾಟಿಸಿ ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಕೋರಿದರು.
ಬ್ಯಾಂಕಿನ ವ್ಯವಸ್ಥಾಪಕರಾದ ಪದ್ಮನಾಭ ಜಿ, ಹಿದಾಯ ಫೌಂಡೇಶನ್ ಯೂತ್ ವಿಂಗ್ ಉಪಾಧ್ಯಕ್ಷ ಆಶಿಕ್ ಕುಕ್ಕಾಜೆ, ಗುಡ್ ವೇ ಫೌಂಡೇಶನ್ ಕೋಶಾಧಿಕಾರಿ ರಹೀಂ ಮಲ್ಲೂರು, ಪತ್ರಕರ್ತ ಹರೀಶ ಮಾಂಬಾಡಿ, ಮಂಗಳೂರು ಆಧಾರ್ ಸೇವಾ ಕೇಂದ್ರದ ಸಿಬ್ಬಂದಿ ಹೃತ್ವಿಕ್, ಶ್ರೇಯಾ ಉಪಸ್ಥಿತರಿದ್ದರು.
, ಈ ಶಿಬಿರದಲ್ಲಿ ಹೊಸ ಆಧಾರ್ ಕಾರ್ಡ್, ಹೆಸರು, ಜನ್ಮ ದಿನಾಂಕ, ಲಿಂಗ, ಮೊಬೈಲ್ ನಂಬರ್, ಇಮೇಲ್ ಐಡಿ, ವಿಳಾಸ ತಿದ್ದುಪಡಿ, ಪೊಟೊ ಅಪ್ಡೇಟ್, ಮಕ್ಕಳ 5 ವರ್ಷದ ಮತ್ತು 15 ವರ್ಷದ ಅಪ್ಡೇಟ್, ಪ್ರತಿ 10 ವರ್ಷಕ್ಕೊಮ್ಮೆ ಮಾಡಿಕೊಳ್ಳುವ ಅಪ್ಡೇಟ್ ಗ ಳನ್ನು ಮಾಡಿಕೊಡಲಾಗುತ್ತಿದೆ.