ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಮೃತ ದೇಹ ಪತ್ತೆ

ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಅವರ ಮೃತ ದೇಹ ಪತ್ತೆಯಾಗಿದೆ. ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ ಅವರ ಮೃತದೇಹ ಪತ್ತೆಯಾಗಿದೆ. ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. ಇದೀಗ ಮುಮ್ತಾಜ್ ಅಲಿ ಮೃತದೇಹವನ್ನು ಮುಳುಗು ತಜ್ಞರು ಹೊರ ತೆಗೆದಿದ್ದಾರೆ. ಈ ವೇಳೆ ಮೃತದೇಹ ಕಂಡು ಮಾಜಿ ಶಾಸಕ ಮೊಯಿದ್ದೀನ್ ಬಾವಾ ಕಣ್ಣೀರು ಹಾಕಿದ್ದಾರೆ.
ನಿನ್ನೆ ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್ರ ಕಾರು ಪತ್ತೆಯಾಗಿತ್ತು. ಬ್ರಿಡ್ಜ್ ಮೇಲೆ KA19 MG0004 ಸಂಖ್ಯೆಯ BMW X5 ಕಾರು ಕಂಡು ಬಂದಿದೆ. ಈಜು ತಜ್ಞ ಈಶ್ವರ್ ಮಲ್ಪೆ ಅವರು ಮುಮ್ತಾಜ್ ಶೋಧ ಕಾರ್ಯಾಚರಣೆ ನಡೆಸಿದ್ದರು. ಫಲ್ಗುಣಿ ನದಿಯಲ್ಲಿ ಸ್ಕೂಬಾ ಡೈವ್ ಮಾಡಿ ಶೋಧ ನಡೆಸ್ತಿದ್ದರು. ಸದ್ಯ ಈಗ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ.
ಮಾಜಿ ಶಾಸಕ ಮೊಯಿದ್ದೀನ್ ಬಾವ ಕಣ್ಣೀರು ಹಾಕಿದ್ದಾರೆ. ಬ್ಲಾಕ್ ಮೇಲ್ ನಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ನನ್ನ ಸಹೋದರ ಶೈಕ್ಷಣಿಕವಾಗಿ, ಧಾರ್ಮಿಕ ಕಾರ್ಯಗಳಿಂದ ಹೆಸರು ಗಳಿಸಿದ್ದ. ಆತನ ಪ್ರಚಾರವನ್ನ ಸಹಿಸದ ಕೆಲವು ಶಕ್ತಿಗಳು ಕುತಂತ್ರ ಮಾಡಿದ್ದಾರೆ. ಈ ಕಾರಣದಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ ಎಂದು ಹೇಳಿದ್ದಾರೆ.