ಎನ್.ಎಸ್.ಎಸ್ ನಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಉತ್ತೇಜನ :ಡಾ|ಸುಯೋಗ ವರ್ಧನ್
ಬಂಟ್ವಾಳ : ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಉತ್ತೇಜನ ನೀಡುತ್ತದೆ. ವಿದ್ಯಾರ್ಥಿಗಳು ಮಹಾತ್ಮ ಗಾಂಧೀಜಿಯವರ ಕನಸಿನಂತೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಫಗೊಳಿಸುವುದು ಮಾತ್ರವಲ್ಲದೇ ತಮ್ಮ ಅಂತರಂಗವನ್ನು ಸ್ವಚ್ಫಗೊಳಿಸಿಕೊಳ್ಳಬೇಕು ಎಂದು ಬಂಟ್ವಾಳಶ್ರೀ ವೆಂಕಟರಮಣ ಸ್ವಾಮೀ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾತ್ಮಕ ಪ್ರಾಂಶುಪಾಲ ಡಾ|ಸುಯೋಗ ವರ್ಧನ್ ಡಿ.ಎಂ ಹೇಳಿದರು.
ಬಂಟ್ವಾಳ ತಾಲೂಕಿನ ರಾಯಿ ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಸ್ವಚ್ಫತಾ ಹೀ ಸೇವಾ’ ಎಂಬ ಪರಿಕಲ್ಪನೆಯಡಿಯಲ್ಲಿ ಶಿಬಿರಾರ್ಥಿಗಳು ಬಾಹ್ಯ ಸ್ವಚ್ಫತೆಗಿಂತಲೂ ತಮ್ಮ ಮನಸ್ಸನ್ನು ಸ್ವಚ್ಫಗೊಳಿಸಿ ಸಂಸ್ಕಾರ, ಸ್ವಭಾವದಲ್ಲಿಯು ಸ್ವಚ್ಫತೆಯನ್ನು ಮಾಡಿಕೊಂಡಾಗ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ ಎಂದರು.
ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ರಾಯಿ, ಇದರ ಎಸ್‌ಡಿಎಂಸಿ ಅಧ್ಯಕ್ಷ ಹರೀಶ್ ಆಚಾರ್ಯ,ಶಾಲಾ ಮುಖ್ಯೋಪಾಧ್ಯಾಯಿನಿ ಜಾನೆಟ್ ಕೊನ್ಸೆಸೋ, ಸಹಶಿಕ್ಷಕಿ ಬೇಬಿ , ರಾಷ್ಡ್ರೀಯ ಸೇವಾ ಯೋಜನೆಯ ಘಟಕ ನಾಯಕ ಧನುಷ್ ಮತ್ತು ಘಟಕ ನಾಯಕಿ ಪ್ರಾಜ್ಞವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹಶಿಬಿರಾಧಿಕಾರಿಗಳಾದ ಗೀತಾ, ರೂಪ, ಶ್ವೇತಾ, ಮಹೇಶ್, ಮುಸ್ತಾಫ ಮತ್ತು ಗಣೇಶ್ ಮತ್ತಿತರರು ಸಹಕರಿಸಿದರು. ಶಿಬಿರಾರ್ಥಿಗಳಾದ ಗೌತಮ್ ಮತ್ತು ತೃಪ್ತಿ.ಡಿ.ಕುಲಾಲ್ ಅನಿಸಿಕೆ ಅಭಿವ್ಯಕ್ತಪಡಿಸಿದರು. ಶಿಬಿರಾರ್ಥಿಗಳು ಎನ್ನೆಸ್ಸೆಸ್ ಆಶಯ ಗೀತೆ ಹಾಡಿದರು. ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ಬಿ ಪ್ರಸ್ತಾವನೆಗೈದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಲಕ್ಷ್ಮೀನಾರಾಯಣ ಕೆ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಶಿಬಿರಾಧಿಕಾರಿ ಶಶಿಧರ್.ಎಸ್ ವಂದಿಸಿದರು. ಸಹ ಶಿಬಿರಾಧಿಕಾರಿ ಕು.ಭವಿತಾ ಕಾರ‍್ಯಕ್ರಮ ನಿರೂಪಿಸಿದರು.