Published On: Thu, Oct 10th, 2024

ಉದ್ಯಮಿ ರತನ್ ನಾವಲ್ ಟಾಟಾ ನಿಧನ

ಉದ್ಯಮಿ, ಅತ್ಯಂತ ಗೌರವಾನ್ವಿತ ವ್ಯಕ್ತಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಜೀವ ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮತ್ತೆ ಅವರ ಅನಾರೋಗ್ಯ ಉಲ್ಬಣಿಸಿದಾಗ ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ರಾತ್ರಿ ರತನ್ ಟಾಟಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೊಂಬಾಯಿನಲ್ಲಿ 1937ರಲ್ಲಿ ಜನಿಸಿದರು. ರತನ್ ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಿತು. ಅವಿವಾಹಿತ ರತನ್ ಟಾಟಾ ಅವರು ಅಪರೂಪದ ಉದ್ಯಮಿಯಾಗಿ ಬೆಳೆದು ದೇಶದ ಕೈಗಾರಿಕಾ ಕ್ಷೇತ್ರದಲ್ಲಿ ದಂತಕತೆಯಾಗಿದ್ದರು. ದೇಶದ ಆಸ್ತಿಯಾಗಿದ್ದ ರತನ್ ಟಾಟಾ ಅವರು ತಮ್ಮ ಗಳಿಕೆಯನ್ನೆಲ್ಲಾ ದಾನಧರ್ಮಗಳಲ್ಲಿ ವಿನಿಯೋಗಿಸಿದ್ದಾರೆ.

ಪ್ರಮುಖ ಟಾಟಾ ಉದ್ಯಮಗಳಾದ ಟಾಟಾ ಸ್ಟೀಲ್, ಟಾಟಾ ಮೋಟರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟಾಟಾ ಟೀ, ಟಾಟಾ ತಂತ್ರಜ್ಞಾನ, ಇಂಡಿಯನ್ ಹೋಟೆಲ್ಸ್ ಮತ್ತು ಟಾಟಾ ಟೆಲಿ ಸರ್ವಿಸಸ್ ಮುಂತಾದ ಕಂಪನಿಗಳನ್ನು ಸ್ಥಾಪಿಸಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter