ಅ. 15 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಂಟ್ವಾಳಕ್ಕೆ : ಪೂರ್ವಸಿದ್ದತಾ ಸಭೆ
ಬಂಟ್ವಾಳ: ಬಿಜೆಪಿ ರಾಜ್ಯಾಧ್ಯಕ್ಷಬಿ.ವೈ.ವಿಜಯೇಂದ್ರ ಅವರು ಅ. 15 ರಂದು ಬಂಟ್ವಾಳಕ್ಕೆ ಆಗಮಿಸಲಿದ್ದು, ವಿಧಾನ ಪರಿಷತ್ ದ.ಕ.ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿ ಬಿ.ಸಿ.ರೋಡು ಬಳಿಯ ಬ್ರಹ್ಮರಕೂಟ್ಟುನಲ್ಲಿರುವ ಬಂಟವಾಳದ ಬಂಟರ ಭವನದಲ್ಲಿ ಗ್ರಾ.ಪಂ.ಸದಸ್ಯರ ಸಮಾವೇಶದಲ್ಲಿ ಪಾಲ್ಗೊಂಡು ಪರಿಷತ್ ಚುನಾವಣೆಗೆ ಸಂಬಂಧಿಸಿ ರೂಪುರೇಖೆಗಳ ಕುರಿತು ಮಾಹಿತಿ ನೀಡಲಿದ್ದಾರೆ.

ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯಾಧ್ಯಕ್ಷರ ಕಾರ್ಯಕ್ರಮದ ಮಾಹಿತಿ ನೀಡಲಾಯಿತು.
ಈ ಸಂದರ್ಭ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಬಿಜೆಪಿ ಪ್ರಮುಖರು ಒಂದಾಗಿ ಕೆಲಸಮಾಡಬೇಕು, ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸುವುದು ಖಚಿತ ಎಂದರು.ಚುನಾವಣಾ ಸಹ ಸಂಚಾಲಕ, ಶಾಸಕ ರಾಜೇಶ್ ನಾಯ್ಕ್ ಅವರುಮಾತನಾಡಿದರು
ಬಂಟ್ವಾಳ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ವಿ.ಪ. ಸದಸ್ಯ ಪ್ರತಾಪಸಿಂಹ
ನಾಯಕ್, ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಚುನಾವಣ ಸಹಸಂಚಾಲಕ ರಾಕೇಶ್ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವಾರ, ಪ್ರಮುಖರಾದ ಬಿ.ದೇವದಾಸ್ ಶೆಟ್ಟಿ ವಿಕಾಸ್ ಪುತ್ತೂರು, ಬಂಟ್ವಾಳ ಮಂಡಲದ ಪ್ರದಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ, ಶಿವಪ್ರಸಾದ್ ಶೆಟ್ಟಿ ,ಮಂಡಲದ ಚುನಾವಣ ಸಂಚಾಲಕ ಪ್ರಭಾಕರ್ ಪ್ರಭು, ಸಹಸಂಚಾಲಕ ಸಂಜೀವ ಪೂಜಾರಿ ಪಿಲಿಂಗಾಲು ಮತ್ತಿತರರಿದ್ದರು.