ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪ್ರಪಾತಕ್ಕೆ, ಚಾಲಕ ಸಾವು

ಪುತ್ತೂರು: ಉಪ್ಪಿನಂಗಡಿಯ ಉದನೆ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಈ ಘಟನೆಯಿಂದ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಾವನ್ನಪ್ಪಿರುವ ಚಾಲಕನನ್ನು ಭರತ್ ಎಂದು ಗುರುತಿಸಲಾಗಿದೆ.
ಇನ್ನು ಈ ಅಪಘಾತದಲ್ಲಿ ಬಸ್ ನಿರ್ವಹಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆ ವೇಳೆ ಬಸ್ನಲ್ಲಿ ಪ್ರಯಾಣಿಕರು ಯಾರು ಇರಲಿಲ್ಲ, ಚಾಲಕ ಹಾಗೂ ನಿರ್ವಹಕ ಮಾತ್ರ ಇದದ್ದು, ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.