ಕಟೀಲು: ಕಟೀಲು ದುರ್ಗಾಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿದ ಕ್ರಿಕೆಟ್ ತಾರೆ ಶಿವಂ ದುಬೆ

ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇಗುಲಕ್ಕೆ ಅನೇಕ ನಟ- ನಟಿಯರು ಕ್ರಿಕೆಟ್ ತಾರೆಯರು ಭೇಟಿ ನೀಡುತ್ತಾರೆ. ಸಲೆಬ್ರಿಟಿಗಳು ಕಟೀಲು, ಪೊಳಲಿ, ಇನ್ನು ದಕ್ಷಿಣ ಕನ್ನಡದ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಇದೀಗ ಇಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರ ಶಿವಂ ದುಬೆ ಕಟೀಲು ದುರ್ಗಾಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಕಟೀಲು ದುರ್ಗಾಪರಮೇಶ್ವರಿ ಕೃಪೆಗೆ ಪಾತ್ರರಾಗಿದ್ದಾರೆ.
ದಕ್ಷಿಣ ಕನ್ನಡದ ಜಿಲ್ಲೆಯಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ಈ ವೇಳೆ ಮಂಗಳೂರಿನಲ್ಲಿ ಪಿಲಿ ನಲಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಶಿವಂ ದುಬೆ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೂ ಮುನ್ನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೂ ಶಿವಂ ದುಬೆ ಭೇಟಿ ನೀಡಿದ್ದಾರೆ.
ಶಿವಂ ದುಬೆ ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಿವಂ ದುಬೆ ಅವರನ್ನು ಕಟೀಲು ದೇವಳದ ಅರ್ಚಕರು ಗೌರವಿಸಿ ಸನ್ಮಾನಿಸಿದರು. ಇದಕ್ಕೂ ಮುನ್ನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅವರಿಗೆ ವಿಶೇಷ ಸ್ವಾಗತ ನೀಡಲಾಗಿತ್ತು.