ರಾಯಿ:ಸಾಮಾಜಿಕ, ಧಾರ್ಮಿಕ ಸಾಧಕರಿಗೆ ಸನ್ಮಾನ
ಬಂಟ್ವಾಳ:ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಕಳೆದ 22 ವರ್ಷಗಳಿಂದ ನಡೆಯುತ್ತಿರುವ ಸಾರ್ವಜನಿಕ ಶ್ರೀ ಶಾರದೋತ್ಸವ ಸಂದರ್ಭದಲ್ಲಿ ರಾಯಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಅಭಿನಂದನೀಯ ಎಂದು ಟ್ರಸ್ಟ್ ಅಧ್ಯಕ್ಷ ಎಂ.ದುರ್ಗಾದಾಸ್ ಶೆಟ್ಟಿ ಹೇಳಿದರು.

ಇಲ್ಲಿನ ರಾಯಿ ಪೇಟೆಯಲ್ಲಿ 22ನೇ ವರ್ಷದ ಶಾರದೋತ್ಸವ ಪ್ರಯುಕ್ತ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು.
ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಧುಕರ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟಿ ವಸಂತ ಕುಮಾರ್ ಅಣ್ಣಳಿಕೆ ಶುಭ ಹಾರೈಸಿದರು. ಇದೇ ವೇಳೆ ಸಾಮಾಜಿಕ ಕ್ಷೇತ್ರದಲ್ಲಿ ಕೃಷ್ಣ ಬೆಂಗಳೂರು ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಉಮಾನಾಥ ಸಪಲ್ಯ ಇವರನ್ನು ಸನ್ಮಾನಿಸಿ, ಸ್ಥಳೀಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ಸನ್ಮಾನಿತರನ್ನು ಪರಿಚಯಿಸಿದರು.
ಪ್ರಮುಖರಾದ ರಾಜೇಶ ಶೆಟ್ಟಿ ಸೀತಾಳ, ಹರೀಶ ಆಚಾರ್ಯ, ಪರಮೇಶ್ವರ ಪೂಜಾರಿ, ರಾಘವ ಅಮೀನ್, ಕೃಷ್ಣಪ್ಪ ಪೂಜಾರಿ, ವಸಂತ ಗೌಡ ಮುದ್ದಾಜೆ, ಸತೀಶ ಬೊಲ್ಪೊಟ್ಟು, ಸೂರಜ್ ಪಾಂಡವರಗುಡ್ಡೆ ಮತ್ತಿತರರು ಇದ್ದರು.
ಟ್ರಸ್ಟಿ ಪ್ರವೀಣ ಅಂಚನ್ ಕೊಯಿಲ ಸ್ವಾಗತಿಸಿ, ದಾಮೋದರ ಕರ್ಪೆ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.