ಮಂಗಳೂರು : ಪೆಟ್ರೋಲ್ ಚಾಲಿತ ಸ್ಕೂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ, ತಪ್ಪಿದ ಭಾರಿ ಅನಾಹುತ

ವಸತಿ ಗೃಹದಲ್ಲಿ ನಿಲ್ಲಿಸಿದ್ದ ಪೆಟ್ರೋಲ್ ಚಾಲಿತ ಟಿವಿಎಸ್ ಎನ್‌ಟಾರ್ಕ್ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡಿರುವ ಭಯಾನಕ ಘಟನೆಯೂ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ನಡೆದಿದೆ.
ಎರಡು ತಿಂಗಳ ಹಿಂದೆಯಷ್ಟೇ ಐಟಿಐ ವಿದ್ಯಾರ್ಥಿ ರಾಕೇಶ್ ಈ ಸ್ಕೂಟರ್ ಖರೀದಿಸಿದ್ದನು. ರಾಕೇಶ್ ಮಾಲೀಕತ್ವದ ಸ್ಕೂಟರ್ 12:30 ರ ಸುಮಾರಿಗೆ ಹೊತ್ತಿ ಉರಿದಿದ್ದು, ಮನೆಯ ಕಿಟಕಿ ಮತ್ತು ವಿದ್ಯುತ್ ತಂತಿಗಳಿಗೆ ವೇಗವಾಗಿ ಬೆಂಕಿ ವ್ಯಾಪಿಸಿಕೊಂಡಿದೆ.
ಅಷ್ಟರಲ್ಲಿ ಮನೆಯ ಸದಸ್ಯರು ಎಚ್ಚರಗೊಂಡಿದ್ದು, ದೊಡ್ಡ ಅನಾಹುತ ಸಂಭವಿಸುವ ಮೊದಲೇ ಅಗ್ನಿಯನ್ನು ನಂದಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮನೆಯ ಆಸ್ತಿಪಾಸ್ತಿಗೆ ಸ್ವಲ್ಪ ಹಾನಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತನಿಖಾಧಿಕಾರಿಗಳು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.