ಪುತ್ತೂರು : ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅವರು ಚಿಕಿತ್ಸೆಗೆ ಸ್ಪಂದಿಸದೆ ನಿನ್ನೆ ಬೆಳಗ್ಗೆ (ಅ. 18) ಮೃತ ಪಟ್ಟಿದ್ದಾರೆ.
ನೇರಳ ಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ವೇಳೆ ನ್ಯಾನೋ ಕಾರು ನಡುವೆ ಅಪಘಾತವೊಂದು ಸಂಭವಿಸಿತ್ತು.
ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹ ಲೋಕ ತ್ಯಜಿಸಿದ್ದಾರೆ.