Published On: Mon, Oct 21st, 2024

ಮಂಗಳೂರು: ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ದೂರು ದಾಖಲಿಸಿದ ಸಿಬ್ಬಂದಿ

ಭಾರತದ ವಿಮಾನಯಾನ ಸಂಸ್ಥೆಗಳಿಗೆ ಕಳೆದೊಂದು ದಿನದಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ.
ಮಧ್ಯಾಹ್ನ 12:35 ರ ಸುಮಾರಿಗೆ ಸ್ಕಿಜೋಫ್ರೇನಿಯಾ 111 ಎಂಬ ಖಾತೆಯಿಂದ ಟ್ವಿಟರ್‌ನಲ್ಲಿ ಬಾಂಬ್ ಬೆದರಿಕೆ ಸಂದೇಶವೊಂದು ಬಂದಿದೆ. ಈ ಸಂದೇಶದಲ್ಲಿ ತಭಾರತದ ವಿವಿಧ ಭಾಗಗಳಲ್ಲಿ ಆರು ಏರ್ ಇಂಡಿಯಾ ವಿಮಾನಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ತಿಳಿಸಲಾಗಿದೆ.

ಮಂಗಳೂರಿನ ಏರ್ ಇಂಡಿಯಾ ಸಿಬ್ಬಂದಿ ಮಧ್ಯಾಹ್ನ 1:30ರ ಸುಮಾರಿಗೆ ಈ ಸಂದೇಶವನ್ನು ಗಮನಿಸಿ ತಕ್ಷಣ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.ಮಂಗಳೂರಿನಿಂದ ಬೆಳಗ್ಗೆ 9:30ಕ್ಕೆ ಹೊರಟಿದ್ದ ವಿಮಾನ ಮಧ್ಯಾಹ್ನ 1:30ಕ್ಕೆ ಸುರಕ್ಷಿತವಾಗಿ ದುಬೈಗೆ ಬಂದಿಳಿದಿದೆ.

ಆದರೆ ಈ ವಿಮಾನದಲ್ಲಿ ಯಾವುದೇ ಅಪಾಯಕಾರಿ ವಸ್ತುಗಳು ಕಂಡುಬಂದಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯಕ್ಕೆ ಇದಕ್ಕೆ ಸಂಬಂಧಪಟ್ಟಂತೆ ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter