ಬಡಗಬೆಳ್ಳೂರು: ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ
ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಸದ್ರಿ ದೇವಸ್ಥಾನದ ತಂತ್ರಿಗಳಾದ ವಿಷ್ಣುಮೂರ್ತಿ ತಂತ್ರಿಗಳು ಎಡಪದವು ಹಾಗೂ ದೇವಸ್ಥಾನದ ವಾಸ್ತುಶಿಲ್ಪಿ ಮಹೇಶ್ ಮುನಿಯಂಗಲ ಇವರ ಮಾರ್ಗದರ್ಶನದ ನೇತೃತ್ವದಲ್ಲಿ ಅಕ್ಟೋಬರ್ 24 ರಂದು ಗುರುವಾರ ಬೆಳಗ್ಗೆ 8.04 ಗಂಟೆಗೆ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ನಡೆಯಲಿದೆ.
ಶಿಲಾನ್ಯಾಸ ಕಾರ್ಯಕ್ರಮವನ್ನು ಪೊಳಲಿ ರಾಮಕೃಷ್ಣ ತಪೋವನದ ಶ್ರೀ ವಿವೇಕಚೈತನ್ಯಾನಂದ ಸ್ವಾಮೀಜಿಯವರು ನೆರವೇರಿಸಲಿದ್ದಾರೆ. ಈ ಶುಭ ಗ್ರೂಪ್ ಮಾಲೀಕರಾದ ಭುವನೇಶ್ ಪಚ್ಚಿನಡ್ಕ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾ ಗಿ ದಕ್ಷಿಣ ಕನ್ನಡ ಜಿಲ್ಲೆ ಸಂಸದ ಬ್ರಿಜೇಶ್ ಚೌಟ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನ್ಯಾಕ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ಶ್ರೀ ಕಾವೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರು ರಘು ಎಲ್. ಶೆಟ್ಟಿ, ಪಟ್ಲ ಫೌಂಡೇಶನ್ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಟಿ, ಅಗ್ರಜ ಬಿಲ್ಡರ್ಸ್ ಸಂದೇಶ್ ಶೆಟ್ಟಿ, ಬಡಗಬೆಳ್ಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರೂಪಾ ನಾರಾಯಣ ನಾಯಕ್ ಮತ್ತಿತ್ತರು ಭಾಗಿಯಾಗಲಿದ್ದಾರೆ