ಬಂಟ್ವಾಳ : ಜಿಲ್ಲೆಯಲ್ಲೇ ಹೊಸ ಕರೆ ನಿರ್ಮಿಸಿ ಕಂಬಳ ಕೂಟ ಆಯೋಜಿಸುವ ಮೂಲಕ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳ ಸಮಿತಿ ಸಾಧನೆ ಹಾಗೂ ಅಂತರ್ ರಾಷ್ಟ್ರೀಯ ರೋಟರಿ ಕ್ಲಬ್ ಕಂಬಳ ಕೂಟ ಆಯೋಜಿಸುವ ಮೂಲಕ ಕಂಬಳಾಸಕ್ತ ಕೃಷಿಕರು ಮತ್ತು ವಿವಿಧ ಸಂಘ ಸಂಸ್ಥೆಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಎಂದರು.

ಅವರು ಇಲ್ಲಿನ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆಯಲ್ಲಿ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಸಮಾರೋಪಗೊಂಡ ಸಬ್ ಜ್ಯೂನಿಯರ್ ವಿಭಾಗದ ಹಗ್ಗ ಮತ್ತು ನೇಗಿಲು ವಿಭಾಗದ ‘ರೋಟರಿ ಕಂಬಳ ಕೂಟ’ ದಲ್ಲಿ ಮಾತನಾಡಿದರು. ಇದೇ ವೇಳೆ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾದ ಬೆಳಪು ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ‘ಅವಿಭಜಿತ ಜಿಲ್ಲೆಯಲ್ಲಿ ಕಂಬಳ ಕ್ರೀಡೆಯಲ್ಲಿ ಪಾರದರ್ಶಕ ಫಲಿತಾಂಶ ಮತ್ತು ನಿಗದಿತ ಸಮಯಕ್ಕೆ ಮುಕ್ತಾಯಗೊಳಿಸಲು ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆಯಾಗುತ್ತಿದೆ’ ಎಂದರು.

ರೋಟರಿ ಕ್ಲಬ್ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಜಿಲ್ಲಾ ಗವರ್ನರ್ ಎನ್.ಪ್ರಕಾಶ್ ಕಾರಂತ್, ಬೂಡ ಅಧ್ಯಕ್ಷ ಬೇಬಿ ಕುಂದರ್, ಉದ್ಯಮಿ ಭುವನೇಶ್ ಪಚ್ಚಿನಡ್ಕ, ರೋಟರಿ ಜಿಲ್ಲಾ ಕಾರ್ಯದರ್ಶಿ ರಿತೇಶ್ ಬಾಳಿಗಾ, ಸಹಾಯಕ ಗವರ್ನರ್ ಮಹಮ್ಮದ್ ವಳವೂರು, ಜಯರಾಮ ರೈ, ರಾಜಗೋಪಾಲ ರೈ ಮಂಗಳೂರು, ಕೃಷ್ಣ ಶೆಟ್ಟಿ, ಕದ್ರಿ ನವನೀತ್ ಶೆಟ್ಟಿ, ಕ್ಲಬ್ಬಿನ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್, ಉಪಾಧ್ಯಕ್ಷ ವಿಜಯ ಫೆರ್ನಾಂಡಿಸ್, ವಲಯಾಧ್ಯಕ್ಷ ಗಣೇಶ ಶೆಟ್ಟಿ ಸಿದ್ಧಕಟ್ಟೆ, ವಿವಿಧ ಕ್ಲಬ್ಬಿನ ಅಧ್ಯಕ್ಷರಾದ ಶಿವಯ್ಯ ಎಸ್.ಎಲ್., ಕಿಶೋರ್ ಕುಮಾರ್ ಬಿ.ಸಿ.ರೋಡು, ಟಿ.ಶೇಷಪ್ಪ ಮೂಲ್ಯ, ಮಾಜಿ ಅಧ್ಯಕ್ಷ ಅಶ್ವನಿ ಕುಮಾರ್ ರೈ, ಜಿ.ಪಂ.ಮಾಜಿ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಬಿ.ಪದ್ಮಶೇಖರ ಜೈನ್ ಗ್ರಾ.ಪಂ.ಅಧ್ಯಕ್ಷ ಶೇಖರ ಶೆಟ್ಟಿ ಕುಕ್ಕಿಪಾಡಿ, ತಾ.ಪಂ.ಮಾಜಿ ಸದಸ್ಯರಾದ ರತ್ನ ಕುಮಾರ್ ಚೌಟ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಈ ವೇಳೆಯಲ್ಲಿ ವಿಜೇತ ಕೋಣಗಳ ಮಾಲೀಕರಿಗೆ ಚಿನ್ನದ ಪದಕ ಮತ್ತು ಓಟಗಾರರಿಗೆ ಟ್ರೋಫಿ ವಿತರಿಸಲಾಯಿತು. ತೀರ್ಪುಗಾರರಾದ ವಿಜಯ ಕುಮಾರ್ ಕಂಗಿನ ಮನೆ ವಿಜೇತರ ಪಟ್ಟಿಯನ್ನು ಪ್ರಕಟಿಸಿದರು. ಕ್ಲಬ್ಬಿನ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ ಸ್ವಾಗತಿಸಿ, ಕಾರ್ಯದರ್ಶಿ ರಾಜೇಶ ಶೆಟ್ಟಿ ಸೀತಾಳ ವಂದಿಸಿದರು. ಮಾಜಿ ಸಹಾಯಕ ಗವರ್ನರ್ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ ಮತ್ತು ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ ಕಾರ್ಯಕ್ರಮವನ್ನು ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *