ಹಿಂದೂ ಭದ್ರಕೋಟೆಯಲ್ಲಿ ಮತ್ತೆ ಬಿಜೆಪಿಗೆ ಜಯ, ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಕಿಶೋರ್ ಕುಮಾರ್ ಪುತ್ತೂರಿಗೆ ಗೆಲುವು
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಡೆದ ವಿಧಾನ ಪರಿಷತ್ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ವಿರುದ್ಧ 1,697 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನವನ್ನು ಮತ್ತೆ ಬಿಜೆಪಿ ತನ್ನದಾಗಿಸಿದೆ. ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನವನ್ನು ಮತ್ತೆ ಬಿಜೆಪಿ ಲೋಕಸಭೆ ಸ್ಪರ್ಧಿಸಿ ಜಯಗಳಿಸಿ ಸಂಸದರಾದ ನಂತರ ಪರಿಷತ್ ಸ್ಥಾನ ಖಾಲಿ ಇತ್ತು. ಇದೀಗ ವಿಧಾನ ಪರಿಷತಿಗೆ ಚುನಾವಣೆ ನಡೆದು ಬಿಜೆಪಿ ಅಭ್ಯರ್ಥಿ ವಿಜಯ ಸಾಧಿಸಿದ್ದಾರೆ.
ಅ.21 ರಂದು ಉಪಚುನಾವಣೆ ನಡೆದಿದ್ದು, ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಲಾಗಿದೆ. ಇಂದು ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಎಣಿಕೆ ನಡೆದಿದ್ದು, ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಯಿತು. ಇದರಲ್ಲಿ ಬಿಜೆಪಿ ಅಭ್ಯರ್ಥಿಯು 3655 ಮತ, ಕಾಂಗ್ರೆಸ್ 1958, ಎಸ್ಡಿಪಿಐ 195, ಪಕ್ಷೇತರ 9 ಮತ್ತು 90 ಅಸಿಂಧು ಮತಗಳಾಗಿವೆ. ಈ ಮೂಲಕ ಬಿಜೆಪಿಯ ಕಿಶೋರ್ ಕುಮಾರ್ ಗೆಲುವು ಸಾಧಿಸಿದ್ದು, ಬಿಜೆಪಿ ತನ್ನ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿ ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 6,032 ಮತದಾರರಿದ್ದರು. ಇದರಲ್ಲಿ 5,906 ಮಂದಿ ಮತ ಚಲಾಯಿಸಿದ್ದರು. ಉಭಯ ಜಿಲ್ಲೆಗಳ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಶಾಸಕರು ಮತ್ತು ಸಂಸದರು ಈ ಕ್ಷೇತ್ರದ ಮತದಾರರಾಗಿದ್ದರು.