ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಭಾರೀ ಕುತೂಹಲ ಸೃಷ್ಟಿಸಿದೆ. ಈ ಬಾರಿ ಜಿದ್ದಾಜಿದ್ದಿ ಖಂಡಿತ ಎಂಬಂತೆ ಕಾಣುತ್ತಿದೆ. ಕಾಂಗ್ರೆಸ್​​​ನಿಂದ ಬಿಜೆಪಿಯಲ್ಲಿದ್ದ ಸಿಪಿ ಯೋಗೇಶ್ವರ್​ ಒಂದು ಕಡೆಯಾದರೆ. ಇದೀಗ ಬಿಜೆಪಿ ಮತ್ತು ಜೆಡಿಎಸ್​​​​​ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಿಖಿಲ್​​​ ಕುಮಾರ್​​​ ಸ್ವಾಮಿಯವನ್ನು ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಅಭ್ಯರ್ಥಿಯಾಗಿ ಮೈತ್ರಿ ಪಕ್ಷಗಳು ಘೋಷಣೆ ಮಾಡಿದೆ. ನಾಳೆ ನಿಖಿಲ್​​​ ಕುಮಾರ್​​ ಸ್ವಾಮಿಯವರ ನಾಮಪತ್ರ ಸಲ್ಲಿಕೆ ನಡೆಯಲಿದೆ. ಇನ್ನು ಒಂದು ದಿನ ಮಾತ್ರ ಬಾಕಿ ಇರುವ ಕಾರಣ ನಾಳೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿಂದು ನಡೆದ ಜೆಡಿಎಸ್​​-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್​ ಹೆಸರು ಘೋಷಣೆ ಮಾಡಲಾಗಿದೆ. ಈ ಹಿಂದೆ ಬಿಎಸ್​ ಯಡಿಯೂರಪ್ಪ ಅವರೇ ಜೆಡಿಎಸ್​​​ ಪಕ್ಷ ವ್ಯಕ್ತಿಯೇ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಎನ್​​ಡಿಎ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನಿಖಿಲ್ ಸ್ಪರ್ಧೆಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಬಳಿಕ ಯಡಿಯೂರಪ್ಪ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಮನ್ವಯ ಸಭೆ ನಡೆಸಿ ನಂತರ ನಿಖಿಲ್​ ಕುಮಾರಸ್ವಾಮಿ ಎನ್​ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು. ಇದೀಗ ಚನ್ನಪಟ್ಟಣ ಎನ್​ಡಿಎ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ.

By suddi9

Leave a Reply

Your email address will not be published. Required fields are marked *