ಬಡಗಬೆಳ್ಳೂರು: ಇಂದು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ
ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ಅ.24ರಂದು (ಇಂದು) ಬೆಳಗ್ಗೆ 8:04 ಗಂಟೆಗೆ ವಿಷ್ಣುಮೂರ್ತಿ ತಂತ್ರಿ ಎಡಪದವು ಮತ್ತು ವಾಸ್ತುಶಿಲ್ಪಿ ಮಹೇಶ್ ಮುನಿಯಂಗಲ ಮಾರ್ಗದರ್ಶನದಲ್ಲಿ ನಡೆದಿದೆ.
ಪೊಳಲಿ ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಜೀರ್ಣೋದ್ಧಾರ ಸಮಿತಿ ಅದ್ಯಕ್ಷ ಭುವನೇಶ್ ಪಚ್ಚಿನಡ್ಕ ಅದ್ಯಕ್ಷತೆ ವಹಿಸಿದ್ದು, ಮಾಧುಕೋಡಿ ವಿಜಯ ಸುವರ್ಣ ಗುರೂಜಿ ಅತಿಥಿಗಳಾಗಿ ಮಾಜಿ ಸಚಿವ ರಮಾನಾಥ ರೈ, ಕಾವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ರಘು ಎಲ್. ಶೆಟ್ಟಿ, ಬಡಗಬೆಳ್ಳೂರು ಗ್ರಾಮ ಪಂಚಾಯತ್ ಅದ್ಯಕ್ಷೆ ರೂಪಾ ನಾಯಕ್ , ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬೇಬಿ ಕುಂದರ್, ದೇವಪ್ಪ ಪೂಜಾರಿ ಬಾಲಿಕೆ, ಚಂದ್ರಶೇಖರ್ ಭಂಡಾರಿ ಅಮ್ಮುಂಜೆ, ಕೃಷ್ಣಪ್ರಸಾದ್ ರೈ ಬೆಳ್ಳೂರುಗುತ್ತು ಕ್ಷೇತ್ರದ ಸಂದೀಪ್,ವಸಂತ್ , ದಿನೇಶ್, ವಸಂತ್ ,ರಮೇಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಶಶಿಕಿರಣ್ ಸ್ವಾಗತಿಸಿ ವಂದಿಸಿ, ದಿನೇಶ್ ವರಕೋಡಿ ಕಾರ್ಯಕ್ರಮವನ್ನು ನಿರೂಪಿಸಿದರು.