ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಫಿಕ್ಸ್ , ಇಂದು ಮಹತ್ವದ ತೀರ್ಪು ಪ್ರಕಟ

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ದೋಷಿ ಎಂದು ನ್ಯಾಯಾಲಯ ಆದೇಶವನ್ನು ನೀಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಶಿಕ್ಷೆ ಪ್ರಮಾಣ ಪ್ರಕಟಿಸುವ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಅಕ್ಟೋಬರ್ 26ರಂದು ಶಿಕ್ಷೆಯ ಪ್ರಮಾಣ ಘೋಷಣೆಯನ್ನು ಮುಂದೂಡಿದ್ದರು.
ಆದರೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಮೂರನೇ ಪ್ರಕರಣದಲ್ಲಿ ಈ ಶಿಕ್ಷೆ ಪ್ರಕಟಿಸಲಾಗಿದೆ. ಇದಲ್ಲದೆ ಉಳಿದ 5 ಪ್ರಕರಣಗಳಲ್ಲಿಯೂ ಶಿಕ್ಷೆ ಪ್ರಮಾಣ ಹಾಗೂ ದಂಡ ಪ್ರಕಟಿಸಲಾಗಿದೆ.
ಒಳಸಂಚು ಆರೋಪದ ಅಡಿ 5 ವರ್ಷ ಜೈಲು ಶಿಕ್ಷೆ, ವಂಚನೆ ಕೇಸ್ ನಲ್ಲಿ 7 ವರ್ಷ ಕಠಿಣ ಶಿಕ್ಷೆ, ಕಳ್ಳತನ ಪ್ರಕರಣದಲ್ಲಿ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇನ್ನು 4,5 ಹಾಗೂ 6ನೇ ಕೇಸ್ ನಲ್ಲಿ ಕೂಡ ಶಿಕ್ಷೆ ವಿಧಿಸಿದೆ. ಎಲ್ಲ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 44 ಕೋಟಿ ದಂಡ ವಿಧಿಸಿದ ಕೋರ್ಟ್ ದಂಡದ ಮೊತ್ತವನ್ನು ಸರ್ಕಾರಕ್ಕೆ ಜಪ್ತಿ ಮಾಡಿಕೊಳ್ಳಲು ಆದೇಶ ನೀಡಿದೆ.
ಆದರೆ ಇದೀಗ ಒಟ್ಟು ಆರು ಪ್ರಕರಣಗಳಲ್ಲಿ ಈವರೆಗೆ ವಿಧಿಸಿದ ದಂಡದ ಮೊತ್ತ 44 ಕೋಟಿ ರೂಪಾಯಿ ದಾಟಿದೆ. ಈಗ ಕಳೆದಿರುವ ಶಿಕ್ಷೆ ಪ್ರಮಾಣ ಹೊರತುಪಡಿಸಿ ಉಳಿದ ಶಿಕ್ಷೆ ಅನುಭವಿಸಬೇಕಿದೆ. ಸತೀಶ್ ಸೈಲ್ ಜತೆ ಮಹೇಶ್ ಬಿಳಿಯೆ, ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್ ಖಾರದಪುಡಿ ಮಹೇಶ್, ಮಲ್ಲಿಕಾರ್ಜುನ ಶಿಪ್ಪಿಂಗ್‌ಗೂ ಜೈಲು ಶಿಕ್ಷೆ ವಿಧಿಸಲಾಗಿದೆ.