ನಾರಾಯಣಗುರುಗಳು ಧಾರ್ಮಿಕ ಸ್ವಾತಂತ್ರ್ಯ ನೀಡಿದ ಮೌನಕ್ರಾಂತಿಯ ಹರಿಕಾರರು : ದಿನೇಶ್ ಸುವರ್ಣ ರಾಯಿ
ಬಂಟ್ವಾಳ: ಕೇರಳದ ಅರವೀಪುರದಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡುವ ಮೂಲಕ ಹಿಂದುಳಿದ ವರ್ಗಗಳ ಜನರಿಗೆ ಮೌನ ಕ್ರಾಂತಿಯ ಮೂಲಕ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಯುವವಾಹಿನಿ ಬಂಟ್ಟಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದ್ದಾರೆ.
ಅವರು ಬಂಟ್ವಾಳದ ಯಶೋಧರ ಪೂಜಾರಿ ಕಡಂಬಲ್ಕೆ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 17 ರಲ್ಲಿ ಗುರುಸಂದೇಶ ನೀಡಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಯುವವಾಹಿನಿಯ ಪ್ರಥಮ ಉಪಾಧ್ಯಕ್ಷರಾದ ನಾರಾಯಣ ಪಲ್ಲಿಕಂಡ,ನಿರ್ದೇಶಕರಾದ, ಮಧುಸೂದನ್ ಮಧ್ವ & ಮಹೇಶ್ ಬೊಳ್ಳಾಯಿ, ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ಕುದನೆ, ಮಾಜಿ ಅಧ್ಯಕ್ಷರಾದ ನಾಗೇಶ್ ಪೊನ್ನೋಡಿ, ಪ್ರೇಮನಾಥ್ ಕರ್ಕೇರ, ಶಿವಾನಂದ ಎಂ, ಅರುಣ್ ಬಿ.ಸಿ ರೋಡ್ ಸದಸ್ಯರಾದ ,ಯತೀಶ್ ಬೊಳ್ಳಾಯಿ, ಪ್ರಶಾಂತ್ ಏರಮಲೆ, ನಾಗೇಶ್ ಏಲಬೆ, ಜಗದೀಶ್ ಕಲ್ಲಡ್ಕ , ಸುನಿತಾ ನಿತಿನ್ ಮಾರ್ನಬೈಲ್, ಹರೀಶ್ ಅಜೆಕಲ, ಶೈಲಜಾ ಹರೀಶ್ ಉಪಸ್ಥಿತರಿದ್ದರು.
ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾದ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ ವಂದಿಸಿದರು