ಬಂಟ್ವಾಳ: ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಭ್ರಷ್ಟಾಚಾರ ನಿರ್ಮೂಲನಾ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಬಂಟ್ವಾಳ ಎಸ್ ವಿ ಎಸ್ ಕಾಲೇಜ್ ಸಭಾಂಗಣದಲ್ಲಿ ನಡೆಯಿತು.

ಇದೇ ವೇಳೆ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ಸುಯೋಗ ವರ್ಧನ್ ಡಿ.ಎಮ್. ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. 

ಎನ್. ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರೀ ಹೆಚ್.ವಿ.  ಭ್ರಷ್ಟಾಚಾರ ನಿರ್ಮೂಲನೆಯ ಮಹತ್ವವನ್ನು ತಿಳಿಸಿದರು. 

ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ  ಶಿವಣ್ಣ ಪ್ರಭು ಉಪಸ್ಥಿತರಿದ್ದರು. 

By suddi9

Leave a Reply

Your email address will not be published. Required fields are marked *