ರೇಣುಕಾ ಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್ ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ದರ್ಶನ್‌ಗೆ ದೀಪಾವಳಿ ಹಬ್ಬಕ್ಕೆ ಬಿಗ್ ಗಿಫ್ಟ್ ಸಿಕ್ಕಿದ್ದು, 140 ದಿನಗಳ ಬಳಿಕ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲಿನಲ್ಲಿದ್ದ ನಟ ದರ್ಶನ್‌ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಪ್ರತಿ ವಾರ ವೈದ್ಯಕೀಯ ವರದಿಯನ್ನು ಸಲ್ಲಿಕೆ ಮಾಡಬೇಕು. ಪಾಸ್‌ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕೆಂದು ಕೋರ್ಟ್ ಷರತ್ತು ವಿಧಿಸಿದೆ.
ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಈ ಕಾರಣದಿಂದಾಗಿ ಮೂರು ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು..ಈ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಪ್ರಸನ್ನ ಕುಮಾರ್ ತೀವ್ರ ಆಕ್ಷೇಪಿಸಿದ್ದರು. ಆದರೆ ಕೊನೆಗೂ ನಟ ದರ್ಶನ್ ಅವರಿಗೆ 6 ವಾರಗಳ ಮಧ್ಯಂತರ ಜಾಮೀನು ಸಿಕ್ಕಿದೆ.