ಆರೋಗ್ಯ ನಿಧಿ ಸೇವಾ ಯೋಜನೆ ಹಸ್ತಾಂತರ
ಬಂಟ್ವಾಳ: ಯುವವಾಹಿನಿ( ರಿ)ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಕೀರ್ತಿಶೇಷ ಸೇಸಪ್ಪ ಕೋಟ್ಯಾನ್ ಸ್ಮರಣಾರ್ಥ ನಡೆದ ಬೈದ್ಯಶ್ರೀ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದ ಸಮಾರೋಪ ಕಾರ್ಯಕ್ರಮದಲ್ಲಿ ಯುವವಾಹಿನಿ ಬಂಟ್ವಾಳ ಘಟಕ ಹಾಗೂ ಪುಣ್ಯಭೂಮಿ ತುಳುನಾಡ ಸೇವಾ ಫೌಂಡೇಷನ್ ವತಿಯಿಂದ ರೋಹಿತ್ ಬೊಳ್ಳಾಯಿಯವರಿಗೆ 20 ಸಾ.ರೂ. ಆರೋಗ್ಯ ನಿಧಿ ಸೇವಾ ಯೋಜನೆಯನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭಾಧ್ಯಕ್ಷ ವಾಸು ಪೂಜಾರಿ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಕಿರಣ್ ಕುಮಾರ್ ಕೋಡಿಕಲ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಉಪಾಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಕೋಶಾಧಿಕಾರಿ ಆನಂದ ಸಾಲ್ಯಾನ್ ಶಂಭೂರು, ಶ್ರೀ ನಾರಾಯಣಗುರು ವೈದಿಕ ಸಮಿತಿ (ರಿ) ಮಂಗಳೂರು ಇದರ ಅಧ್ಯಕ್ಷ ಹರೀಶ್ ಶಾಂತಿ ಪುತ್ತೂರು, ಅಮ್ಟಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಕುಮಾರ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಪುಣ್ಯಭೂಮಿ ಪೌಂಡೇಶನ್ ಟ್ರಸ್ಟ್ ಕೋಶಾಧಿಕಾರಿ ನಳಿನಿ, ಯುವವಾಹಿನಿ ಬಂಟ್ವಾಳ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಉಪಸ್ಥಿತರಿದ್ದರು.