ದೈವಾರಾಧಕ ಲೋಕಯ್ಯ ಸೇರಗೆ ರಾಜ್ಯೋತ್ಸವ ಪ್ರಶಸ್ತಿ
ಬಂಟ್ವಾಳ: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ಈ ಬಾರಿ ಅನೇಕ ಸಾಧಕರು ಈ ಪ್ರಶಸ್ತಿಗೆ ಭಾಜಿನಾಗಿದ್ದಾರೆ. ಇನ್ನು ದಕ್ಷಿಣ ಕನ್ನಡದಿಂದ ದೈವ ನರ್ತಕ ಹಾಗೂ ದೈವಾರಾಧಕ ಲೋಕಯ್ಯ ಸೇರ ಅವರಿಗೆ ಈ ಬಾರಿಗೆ ರಾಜ್ಯೋತ್ಸವ ಲಭಿಸಿದೆ. ಬುಡೋಳಿಯ ಸೇರ ನಿವಾಸಿ ದೈವಾರಾಧಕ ಲೋಕಯ್ಯ ಸೇರ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಳೆದ 57 ವರ್ಷಗಳಿಂದ ಜಾನಪದ ಕಲಾವಿದರಾಗಿ, ದೈವಾರಾಧನೆ ಕ್ಷೇತ್ರದಲ್ಲಿ ನರ್ತಕ ಪಾತ್ರಿಯಾಗಿ ಗಣನೀಯ ಸೇವೆ ಸಲ್ಲಿಸಿದ ಅವರಿಗೆ ಇದೊಂದು ಮಹತ್ವದ ಪ್ರಶಸ್ತಿಯಾಗಿದೆ.
ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಇದರ ಜೊತೆ ವಿವಿಧ ಸಾಧನೆ ಮಾಡಿದ 50 ಪುರಷರ ಹಾಗೂ 59 ಜನ ಮಹಿಳಾ ಸಾಧಕರಿಗೆ ಪ್ರಶಸ್ತಿಯನ್ನು ಸಹ ಘೋಷಣೆ ಮಾಡಲಾಗಿದೆ.
ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮಾತನಾಡಿ, ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ ಆಗಿರುವುದರಿಂದ ವಿಶೇಷ ವರ್ಷ ಎಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುವರ್ಣ ಸಂಭ್ರಮ-50ರ ಸಂಭ್ರಮದಲ್ಲಿ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.