ಬಂಟ್ವಾಳ: ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಕಲ್ಲಡ್ಕ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ
ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟವನ್ನು ಮಾಣಿ,ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ದ.ಕ.ಜಿ.ಪಂ.ಮಾದರಿ ಹಿ.ಪ್ರಾ.ಶಾಲೆ ಕಲ್ಲಡ್ಕ ಶಾಲೆಯು ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದಿದ್ದಾರೆ. ಬಾಲಕರ ವಿಭಾಗದಲ್ಲಿ ವಿದ್ಯಾರ್ಥಿ ಯಶ್ವಿತ್ ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದಿದ್ದು,ಶಮ್ ರಿನ್ 400ಮೀ.ಓಟ ದ್ವಿತೀಯ ಹಾಗೂ 200ಮೀ ಓಟದಲ್ಲಿ ಪ್ರಥಮ, 600ಮೀ ಓಟದಲ್ಲಿ ದ್ವಿತೀಯ ಪಡೆದುಕೊಂಡಿದ್ದಾರೆ.
ಇನ್ನು ವಿದ್ಯಾರ್ಥಿ ಯಶ್ವಿತ್ 100ಮೀ ಓಟದಲ್ಲಿ ಪ್ರಥಮ, 200ಮೀ ಓಟದಲ್ಲಿ ದ್ವಿತೀಯ, 400ಮೀ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನೊಬ್ಬ ವಿದ್ಯಾರ್ಥಿ ಮುಹಮ್ಮದ್ ಹುಸೈನ್ ನಿಫಾಲ್ ಚಕ್ರ ಎಸೆತದಲ್ಲಿ ದ್ವಿತೀಯ ಪಡೆದಿದ್ದು, ಉದ್ದ ಜಿಗಿತ ಚರಣ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಹಾಗೂ ಬಾಲಕಿಯರ ರಿಲೇಯಲ್ಲಿ ಪ್ರಥಮ ಹಾಗೂ ಬಾಲಕರ ರಿಲೇಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.
ಈ ವಿದ್ಯಾರ್ಥಿಗಳು ಮಂಗಳೂರಿನ ಮಂಗಳ ಕ್ರೀಡಾಂಗನಲ್ಲಿ ನಂಬರ್ 4 ರಂದು ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯ ಶಿಕ್ಷಕರು ಅಧ್ಯಾಪಕ ವೃಂದ, ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಅಭಿನಂದಿಸಲಾಯಿತು.