ಪೊಳಲಿ ಟೈಗರ್ಸ್ ತಂಡದ ವತಿಯಿಂದ ಎರಡನೇ ದಿನದ ದೀಪೋತ್ಸವ
ಪೊಳಲಿ:ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿದೀಪಾವಳಿ ಹಬ್ಬದ ಪ್ರಯುಕ್ತ ಪೊಳಲಿಯ ಪುರಲ್ದಪ್ಪೆನ ಮೋಕೆದ ಬೊಳ್ಳಿಲು, ಪೊಳಲಿ ಟೈಗರ್ಸ್ ತಂಡದ ವತಿಯಿಂದ ಐದನೇ ವರ್ಷದ ಮೂರು ದಿನಗಳ ದೀಪೋತ್ಸವ ಮತ್ತು ಕುಣಿತ ಭಜನಾ ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮವನ್ನು ಭುವನೇಶ್ ಪಚ್ಚಿನಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು.
ಮಾಜಿ ಸಚಿವ ಬಿ.ರಮಾನಾಥ ರೈ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಿಥುನ್ ರೈ , ಚಂದ್ರಹಾಸ ಪಲ್ಲಿಪಾಡಿ,ಲಕ್ಷ್ಮೀಶ್ ಶೆಟ್ಟಿ, ಪ್ರಸಾದ್ ಶೆಟ್ಟಿ, ವೆಂಕಟೇಶ್ ನಾವಡ ಪೊಳಲಿ ಪುರಲ್ದಪ್ಪೆನ ಮೋಕೆದ ಬೊಳ್ಳಿಲು, ಪೊಳಲಿ ಟೈಗರ್ಸ್ ತಂಡದ ಮುಖಂಡರಾದ ಸಂತೋಷ್ ಶೆಟ್ಟಿ,ಸುನೀಲ್ ಪೊಳಲಿ ಮುಂತಾದವರು ಇದ್ದರು.ಇರುವೈಲ್ ಭಜನಾ ಮಂಡಳಿಯವರಿಂದ ಭಜನಾಕಾರ್ಯಕ್ರಮ ನಡೆಯಿತು.