ಬಂಟ್ವಾಳ: ವಕ್ಪ್ ಬೋರ್ಡ್ ವಿವಾದ: ನ.4ಕ್ಕೆ ಸರ್ಕಾರ ವಿರುದ್ಧ ಪ್ರತಿಭಟನೆಗೆ ಮುಂದಾದ ಬಿಜೆಪಿ ಬಂಟ್ವಾಳ ಮಂಡಲ
ರಾಜ್ಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ವಕ್ಪ್ ಬೋರ್ಡ್, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ರಾಜ್ಯದಲ್ಲಿ ಭಾರೀ ಕಾವು ಹೆಚ್ಚಿಸಿದೆ. ಎಲ್ಲ ಕಡೆಯಲ್ಲೂ ಈ ಬಗ್ಗೆ ವಿರೋಧಗಳು ಹೆಚ್ಚಾಗಿದೆ. ಈಗಾಗಲೇ ಪ್ರಧಾನಿ ಮೋದಿ ಅಂಗಳಕ್ಕೆ ಈ ಸುದ್ದಿ ಮುಟ್ಟಿದೆ. ಬಿಜೆಪಿಯ ಹಿರಿಯ ನಾಯಕರು ಹಾಗೂ ಶಾಸಕರು ಮೋದಿಗೆ ಪತ್ರ ಬರೆದಿದ್ದಾರೆ. ಇದರ ನಡುವೆ ರಾಜ್ಯದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಗಳನ್ನು ನಡೆಸಲಾಗಿದೆ. ಇದೀಗ ವಕ್ಪ್ ಬೋರ್ಡ್ ಹೆಸರಿನಲ್ಲಿ ಲ್ಯಾಂಡ್ ಜಿಹಾದ್‌ಗೆ ಇಳಿದಿರುವ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರ ನೇತೃತ್ವದಲ್ಲಿ ನ.4 ರಂದು ಬಿ.ಸಿ.ರೋಡಿನಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ.
ಈ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಂಡಲದ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಹಾಗೂ ಪ್ರ.ಕಾರ್ಯದರ್ಶಿಗಳಾದ ಸುದರ್ಶನ್ ಬಜ,ಶಿವಪ್ರಸಾದ್ ಶೆಟ್ಟಿ ಮತ್ತುಮಾಧ್ಯಮ ಸಂಚಾಲಕ ಪುರುಷೋತ್ತಮ ಶೆಟ್ಟಿ ಅವರು ತಿಳಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಯಲ್ಲಿ ಸಾವಿರಾರು ರೈತರು,ಮಠ-ಮಂದಿರಗಳ ದಲಿತರ ಅಸ್ತಿಗಳನ್ನು ಅವರ ಪಹಣಿಯಲ್ಲಿ ವಕ್ಪ್ ಆಸ್ತಿಯೆಂದು ನಮೂದಿಸುವ ಮೂಲಕ ಕಬಳಿಸಲು ಹುನ್ನಾರ ನಡೆಸುತ್ತಿರುವ ಭ್ರಷ್ಟ ಸಿದ್ದರಾಮಯ್ಯನವರ ಸರ್ಕಾರದ ನಡೆಯನ್ನು ಖಂಡಿಸಿ ಈ ಪ್ರತಿಭಟನೆಯನ್ನು ನಡೆಸಲಿದ್ದೇವೆ ಎಂದು ಹೇಳಿದ್ದಾರೆ.
ಸಿಎಂ ಸೂಚನೆಯ ಮೇರೆಗೆ ವಕ್ಪ್ ಸಚಿವ ಜಮೀರ್ ಅಹಮ್ಮದ್ ಅವರು ವಕ್ಪ್ ಆಸ್ತಿ ಹೆಸರಿನಲ್ಲಿ ಜಮೀನನ್ನು ಕಬಳಿಸಲು ಯತ್ನಿಸುತ್ತಿದ್ದು, ಇದರಿಂದಾಗಿ ಉಂಟಾಗಿರುವ ಗೊಂದಲಕ್ಕೆ ಸರಕಾರವೇ ನೇರ ಕಾರಣವಾಗಿದ್ದು,ಸಚಿವ ಜಮೀರ್ ಆಹ್ಮದ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಸರ್ಕಾರಕ್ಕೆ ಒತ್ತಡ ಹಾಕಲಿದ್ದೇವೆ ಎಂದು ಹೇಳಿದ್ದಾರೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿಯು ಪರಿಶಿಷ್ಟ ಜಾತಿ,ಪಂಗಡದ ಜನರಿಗೆ ಮೀಸಲಿಟ್ಟ ಡಿ.ಸಿ ಮನ್ನಾ ಜಾಗ ಮತ್ತು ಗೋಮಾಳದಂಥ ಜಾಗವನ್ನು ಕೂಡ ಕಬಳಿಸಿರುವುದು ಕಂಡುಬಂದಿದ್ದು, ಇದರ ವಿರುದ್ಧವು ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಹೋರಾಟ ಮತ್ತು ಸಂತ್ರಸ್ತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ. ಇಂಥ ಅನಾಹುತ ತಡೆಯಲು ವಕ್ಪ್ ಕಾಯ್ದೆ ತಿದ್ದುಪಡಿಗೆ ಕೇಂದ್ರ ಸರಕಾರ ಜಂಟಿ ಸಂಸದೀಯ ಸಮಿತಿಯನ್ನು ರಚಿಸಿದ್ದು, ಸಿದ್ದರಾಮಯ್ಯ ಸರಕಾರ ಮತ್ತು ಅವರ ಸಂಪುಟ ಸಚಿವರು ಬೆಂಬಲಿಸಬೇಕೆಂದು ಎಂದು ಈ ಮೂಲಕ ಒತ್ತಾಯಿಸಿದ್ದಾರೆ.