ಬಂಟ್ವಾಳ: ಯಮದೂತನಾದ ಖಾಸಗಿ ಬಸ್, ಕಡೆಗೋಳಿಯಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಬಸ್, ಒಬ್ಬ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ
ರಣಭೀಕರ ಅಪಘಾತವೊಂದು ಕಡೆಗೋಳಿಯಲ್ಲಿ ನಡೆದಿದೆ. ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಕಾರಣ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಇನ್ನು ಆತನ ಜತೆಗಿದ್ದ ವ್ಯಕ್ತಿ ಮತ್ತೊಂದು ವ್ಯಕ್ತಿಗೆ ಗಂಭೀರ ಇದೆ ಎಂದು ಹೇಳಲಾಗಿದೆ. ಬಂಟ್ವಾಳದ ಕಡೆಗೋಳಿ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಕಡೆಗೋಳಿ ನಿವಾಸಿ ಪ್ರವೀಣ (30) ಎಂಬ ಗುರುತಿಸಲಾಗಿದ. ಗಾಯಗೊಂಡ ವ್ಯಕ್ತಿಯನ್ನು ಸಂದೀಪ ಎಂದು ಹೇಳಲಾಗಿದೆ.
ಇಬ್ಬರು ಸೇಲ್ಸ್ ಮ್ಯಾನ್ ವೃತ್ತಿಯನ್ನು ಮಾಡುತ್ತಿದ್ದು, ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಬಂದು ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ನಲ್ಲಿದ್ದ ಪ್ರವೀಣ ಸಾವನ್ನಪ್ಪಿದ್ದಾನೆ. ಸಂದೀಪ ಗಂಭೀರ ಗಾಯಗೊಂಡಿದ್ದಾರೆ.
ಇನ್ನು ಗಾಯಗೊಂಡಿರುವ ಸಂದೀಪನ್ನು ಸ್ಥಳೀಯ ಆಸ್ಪತ್ರೆ ಸಾಗಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇನ್ನು ಖಾಸಗಿ ಬಸ್ ಚಾಲಕನ ಅತಿವೇಗದ ಮತ್ತು ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಬಸ್ ಚಾಲಕನ ಮೇಲೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ಇನ್ನು ಖಾಸಗಿ ಬಸ್ಗಳ ಮೇಲೆ ಸ್ಥಳೀಯರ ಮೇಲೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಅನೇಕ ಘಟನೆಗಳು ನಡೆಯುತ್ತಿದ್ದರು. ಆರ್ಟಿಒ ಅಧಿಕಾರಿಗಳು ಕಣ್ಣು ಮುಚ್ಚಿ ಕೂತಿದ್ದಾರೆ. ಅತೀ ವೇಗವಾಗಿ ಬಸ್ ಚಲಾಯಿಸಿ, ಜನರು ಪ್ರಾಣಕ್ಕೆ ತೊಂದರೆ ಉಂಟು ಮಾಡುತ್ತಿದ್ದಾರೆ.