ಪ್ರತಿವರ್ಷ ಕನ್ನಡ ರಾಜ್ಯೋತ್ಸವ ದಿನದಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಪ್ರಶಸ್ತಿ ಕೊಟ್ಟು ಗೌರವಿಸುತ್ತದೆ. ಈ ಬಾರಿಯ ಜಿಲ್ಲಾ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 55 ಮಂದಿಯನ್ನು ಆಯ್ಕೆ ಮಾಡಲಾಗಿತ್ತು. ಅದರಲ್ಲಿ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಕೂಡಾ ಒಬ್ಬರು.

ಕಳೆದ ಇಪ್ಪತ್ತೈದು ವರ್ಷಗಳ ಕಂಬಳ ಕ್ಷೇತ್ರದ ಸಾಧನೆಗಾಗಿ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಅವರನ್ನು ಮಂಗಳೂರಿನಲ್ಲಿ ನಡೆದ ಜಿಲ್ಲಾ ರಾಜ್ಯೋತ್ಸವ ಸಮಾರಂಭದಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.
ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಹಿತ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *