ಕಲ್ಲಡ್ಕ ಶ್ರೀರಾಮ ಮಹಾವಿದ್ಯಾಲಯದಲ್ಲಿ “ತುಡರ್” ದೀಪಾವಳಿ ಸಂಭ್ರಮ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರದೀಪ್ತ ಸಾಂಸ್ಕೃತಿಕ ಸಂಘದ ವತಿಯಿಂದ “ತುಡರ್” ದೀಪಾವಳಿ ಸಂಭ್ರಮ ಕಾರ್ಯಕ್ರಮವು ಅಂತಿಮ ಪದವಿ ವಿದ್ಯಾರ್ಥಿಗಳಿಂದ ನಡೆಯಿತು.
ಶ್ರೀರಾಮ ಪದವಿ ಕಾಲೇಜಿನಲ್ಲಿ ಇದೇ ಮೊದಲ ಬಾರಿಗೆ ಭಾರತದ ವಿಶಿಷ್ಟ, ಮಹತ್ವಪೂರ್ಣ ಹಬ್ಬ ದೀಪಾವಳಿಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಬೆಳಕಿನ ಹಬ್ಬವಾದ ದೀಪಾವಳಿಯ ವಿಶೇಷತೆಗಳನ್ನು ವಿದ್ಯಾರ್ಥಿಗಳು ವಿವಿಧ ಆಕರ್ಷಕ ನೃತ್ಯ ಹಾಗೂ ಪ್ರಹಸನ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಪ್ರಸ್ತುತಪಡಿಸಿದರು. ಈ ಸಂದರ್ಭ ವಿವಿಧ ಸಿಡಿಮದ್ದುಗಳ ಪ್ರದರ್ಶನವು ನಡೆಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು
. ಪ್ರಾಂಶುಪಾಲರಾದ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಹಾಗೂ ಪ್ರದೀಪ್ತ ಸಾಂಸ್ಕೃತಿಕ ಸಂಘದ ನಿರ್ದೇಶಕಿ ವಿನುತಾ ಲಕ್ಷ್ಮಿ ವೇದಿಕೆಯಲ್ಲಿದ್ದರು. ವಿದ್ಯಾರ್ಥಿನಿ ಕು. ಪದ್ಮಶ್ರೀ ಮತ್ತು ವಿದ್ಯಾರ್ಥಿ ಶಶಾಂಕ್ ಶೆಟ್ಟಿಗಾರ್ ಅವರು ಕಾರ್ಯಕ್ರಮ ನಿರ್ವಹಿಸಿದರು.