ಮಂಚಿ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ ವಿಟ್ಲ ವ್ಯಾಪ್ತಿಯ ಮಂಚಿ ಗ್ರಾಮದ ಪುದ್ದೋಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದಿಂದ ಮಂಜೂರಾದ 1ಲಕ್ಷ ರೂ.ಅನುದಾನದ ಪತ್ರವನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್, ಯೋಜನೆಯ ಮಂಚಿ ಒಕ್ಕೂಟ ಅಧ್ಯಕ್ಷರ ದಿವಾಕರ್ ನಾಯಕ್, ಶಾಲಾ ಮುಖ್ಯ ಶಿಕ್ಷಕ ಗಣೇಶ್ ಟಿ,ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಾಲಾ ಶಿಕ್ಷಕರು. ಗ್ರಾಮಾಭಿವೃದ್ಧಿ ಯೋಜನೆಯ ಸಾಲೆತ್ತೂರು ವಲಯ ಮೇಲ್ವಿಚಾರಕಿ ಸವಿತಾ. ಸೇವಾಪ್ರತಿನಿಧಿ ಚಂಚಲಾಕ್ಷಿ ಮೊದಲಾದವರು ಉಪಸ್ಥಿತರಿದ್ದರು.