ಅಮೆರಿಕದ ಅಧ್ಯಕ್ಷರಾಗಿ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ‘ಐತಿಹಾಸಿಕ ಗೆಲುವು’ ಸಾಧಿಸುವ ಮೂಲಕ ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೇರಿರುವ ಟ್ರಂ ಪ್ ​ ಮೊದಲ ಭಾಷಣ ಮಾಡಿದ್ದು, ದೇಶವನ್ನು ಸುಭದ್ರಗೊಳಿಸಲು ಬೇಕಾದ ಎಲ್ಲವನ್ನೂ ಮಾಡುತ್ತೇನೆ ಎಂದು ಹೇಳಿದರು. ಮೇಕ್ ಅಮೆರಿಕ ಗ್ರೇಟ್ ಅಗೇನ್ ಎಂಬ ಘೋಷಣೆಯನ್ನು ಪುನರುಚ್ಚರಿಸಿದ ಡೊನಾಲ್ಡ್ ಟ್ರಂಪ್, ನಾನು ಪ್ರತಿ ಕ್ಷಣವೂ ಅಮೆರಿಕಕ್ಕಾಗಿ ದುಡಿಯುತ್ತೇನೆ ಎಂದು ಹೇಳಿದ್ದಾರೆ.

ಇದು ನನ್ನ ಜೀವನದ ಅತ್ಯಂತ ಮಹತ್ವದ ಕ್ಷಣವಾಗಿದ್ದು, ನನ್ನ ಸರ್ವಸ್ವವನ್ನು ಅಮೆರಿಕಕ್ಕೆ ಸಮರ್ಪಿಸಲಾಗಿದೆ ಎಂದರು. ನಾನು ಪ್ರತಿಯೊಬ್ಬ ನಾಗರಿಕರಿಗಾಗಿ, ನಿಮಗಾಗಿ, ನಿಮ್ಮ ಕುಟುಂಬಕ್ಕಾಗಿ ಮತ್ತು ನಿಮ್ಮ ಭವಿಷ್ಯಕ್ಕಾಗಿ ಹೋರಾಡುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ. ಪ್ರತಿದಿನ, ನನ್ನ ದೇಹದ ಪ್ರತಿ ಉಸಿರಿನೊಂದಿಗೆ ನಾನು ನಿಮಗಾಗಿ ಹೋರಾಡುತ್ತೇನೆ. ನಾವು ನಮ್ಮ ಮಕ್ಕಳಿಗೆ ನೀವು ಅರ್ಹವಾದ ಬಲವಾದ, ಸುರಕ್ಷಿತ ಮತ್ತು ಸಮೃದ್ಧ ಅಮೆರಿಕವನ್ನು ನೀಡುವವರೆಗೂ ನಾನು ವಿಶ್ರಮಿಸುವುದಿಲ್ಲ. ಅದಲ್ಲದೇ, ಉದ್ಯಮಿ ಎಲಾನ್ ಮಸ್ಕ್ ಹೆಸರನ್ನೂ ಪ್ರಸ್ತಾಪಿಸಿದ್ದಾರೆ. ತಮ್ಮ ಬೆಂಬಲಕ್ಕೆ ಧನ್ಯವಾದ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *