Published On: Thu, Nov 7th, 2024

ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಸಾಕ್ಷರತೆ ಹಾಗೂ ನಾಯಕತ್ವ ತರಬೇತಿ

ಬಂಟ್ವಾಳ: ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರಿಗೆ ಒಂದು ದಿನದ ಡಿಜಿಟಲ್ ಸಾಕ್ಷರತೆ ಹಾಗೂ ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಗಳನ್ನೊಳಗೊಂಡ ತರಬೇತಿಯು ಬಂಟ್ವಾಳ ತಾಲೂಕು ಪಂಚಾಯಿತ್ ನ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆಯಿತು.ಇದು ಶಿಕ್ಷಣ ಪೌಂಡೇಶನ್ ಸಂಸ್ಥೆಯ ಗ್ರಾಮ ಡಿ.ಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ನಡೆಯಿತು.

ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ತಾಲೂಕು ಪಂಚಾಯಿತ್ ನ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಸ್ತುತ ದಿನಗಳಲ್ಲಿ ಡಿಜಿಟಲ್ ಸಾಕ್ಷರತೆಯ ಅಗತ್ಯತೆ ಹಾಗೂ ತರಬೇತಿಯಿಂದಾಗುವ ಸಕಾರತ್ಮಕ ಪರಿಣಾಮಗಳ ಬಗ್ಗೆ ತಿಳಿಸಿದರು.

ಶಿಕ್ಷಣ ಪೌಂಡೇಶನ್ ವತಿಯಿಂದ ಗ್ರಾಮ ಪಂಚಾಯತ್ ಅರಿವು ಕೇಂದ್ರಗಳಿಗೆ ಅನೇಕ ರೀತಿಯ ಡಿಜಿಟಲ್ ಸಾಧನಗಳನ್ನು ಒದಗಿಸಿದ್ದು, ಅವುಗಳ ಸಹಾಯದಿಂದ ಗ್ರಾಮೀಣ ಭಾಗದ ಸಮುದಾಯದ ಜನರು ಡಿಜಿಟಲ್ ಸಾಕ್ಷರರಾಗಬೇಕು, ಇದರ ಮೂಲಕ ತಮ್ಮ ದೈನಂದಿನ ಉದ್ಯೋಗ, ವ್ಯವಹಾರಗಳಲ್ಲಿ, ಸದೃಢರಾಗಬೇಕು ಎಂಬ ತಿಳಿಸಿದರು.

ಶಿಕ್ಷಣ ಫೌಂಡೇಶನ್ ಉಡುಪಿ ಜಿಲ್ಲಾ ಸಂಯೋಜಕರಾದ ರೀನಾ ಹೆಗಡೆಯವರು ಡಿಜಿಟಲ್ ಸಾಕ್ಷರತೆ ಮತ್ತು ನಾಯಕತ್ವದ ಬಗ್ಗೆ ಮಾಹಿತಿ‌ ನೀಡಿದರು.
ಬಂಟ್ವಾಳ ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಪ್ರಕಾಶ್, ಗ್ರಂಥಾಲಯ ಮೇಲ್ವಿಚಾರಕರ ವಿಷಯ ನಿರ್ವಾಹರಾಗಿರುವ ಅಶೋಕ್ ಕುಮಾರ್, ಶಿಕ್ಷಣ ಫೌಂಡೇಶನ್ ಜಿಲ್ಲಾ ಸಂಯೋಜಕರಾದ ಲವೀಶ್ ಕುಮಾರ್ ಉಪಸ್ಥಿತರಿದ್ದರು.

53 ಅರಿವು ಕೇಂದ್ರಗಳ ಮೇಲ್ವಿಚಾರಕರು ಈ ತರಬೇತಿಯ ಸದುಪಯೋಗ ಪಡೆದುಕೊಂಡರು. ಪುಣಚ ಗ್ರಾಮ ಪಂಚಾಯತ್ ಅರಿವು ಕೇಂದ್ರ ಮೇಲ್ವಿಚಾರಕರಾದ ಜಯಲಕ್ಷ್ಮಿ ಸ್ವಾಗತಿಸಿದರು. ಕೇಪು ಗ್ರಾಮ ಪಂಚಾಯಿತ್ ಅರಿವು ಕೇಂದ್ರ ಮೇಲ್ವಿಚಾರಕರಾದ ಭವ್ಯ ಕುಮಾರಿ ವಂದಿಸಿದರು.ಶಿಕ್ಷಣ ಫೌಂಡೇಶನ್ ಜಿಲ್ಲಾ ಸಂಯೋಜಕರಾದ ಸುಮತಿ ಕಾರ್ಯಕ್ರಮ ನಿರ್ವಹಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter