ಫಲ್ಗುಣಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ, ಪೊಳಲಿ ಸೇತುವೆಗೆ ಇದುವೇ ಕಂಕಟವೇ? ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ
ಕೈಕಂಬ: ಅಕ್ರಮ ಮರಳುಗಾರಿಕೆ ಇದೊಂದು ಮಂಗಳೂರಿಗೆ ಶಾಪ ವಾಗಿದೆ. ಈ ಅಕ್ರಮ ಮರಳುಗಾರಿಕೆಯಿಂದ ಜೀವ ನದಿಗಳು ನಾಶವಾಗುತ್ತೇವೆ. ಹೌದು ದಕ್ಷಿಣ ಕನ್ನಡದ ಅನೇಕ ನದಿ ಭಾಗಗಳಲ್ಲಿ ಅಕ್ರಮ ಮರಳುಗಾರಿಕೆ ದಂಧೆ ನಡೆಯುತ್ತಿದೆ. ಅಧಿಕಾರಿಗಳು, ರಾಜಕಾರಣಿಗಳು ಕಂಡರೂ ಕಾಣದಂತೆ ಇರುತ್ತಾರೆ. ಇಲ್ಲಿ ಯಾರನ್ನು ಪ್ರಶ್ನೆ ಮಾಡುವವರಿಲ್ಲ. ಇದೀಗ ಈ ಅಕ್ರಮ ಮರಳುಗಾರಿಕೆ ದಂಧೆ ಪೊಳಲಿ ಅಡ್ಡೂರು ಭಾಗದಲ್ಲಿರುವ ಫಲ್ಗುಣಿ ನದಿ ತೀರದಲ್ಲಿ ನಡೆದಿದೆ.
ಹೌದು ಫಲ್ಗುಣಿ ನದಿ ತೀರದಲ್ಲಿ ನಿರಂತರ ಅಕ್ರಮ ಮರಳುಗಾರಿಕೆ ನಡೆಯುತ್ತಲೇ ಇದೆ. ಇದೀಗ ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಪೊಳಲಿ ಸೇತುವೆಗೆ ಇದೇ ಕಂಕಟವಾಗಿದ್ದೆಯೇ ಎಂಬ ಅನುಮಾನ ಶುರುವಾಗಿದೆ.
ಇನ್ನು ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳ ದಂಡು ಧಿಡೀರ್ ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.
ಮಂಗಳೂರು ಬಂಟ್ವಾಳ ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ ಬಂಟ್ವಾಳ ತಾಲೂಕಿನ ತಹಶೀಲ್ದಾರ್ ಅರ್ಚನಾ ಭಟ್ ಅವರ ತಂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ,
ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಿಕೊಂಡಿದ್ದಲ್ಲದೆ ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ಪತ್ತೆಯಾಗಿದೆ. ಇನ್ನು ಈ ಅಕ್ರಮ ಮರಳುಗಾರಿಕೆಯಲ್ಲಿ ಉತ್ತರ ಭಾರತದ ವಲಸಿಗರ ತಂಡವೂ ಇದೆ ಎಂದು ಹೇಳಲಾಗಿದೆ. ಅಧಿಕಾರಿಗಳು ದಾಳಿ ಮಾಡುತ್ತಿದಂತೆ ಅಕ್ರಮ ಮರಳುಗಾರಿಕೆ ಮಾಡುತ್ತಿದ್ದ ಕೂಲಿಕಾರ್ಮಿಕರು ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.
ಇನ್ನು ಈ ಕಾರ್ಯಚರಣೆಯಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ, ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ , ಪೊಳಲಿ ಅಧಿಕಾರಿಗಳು ಇದ್ದರು.