ಜೀವನದಲ್ಲಿ ಮಾನವೀಯತೆ ಮುಖ್ಯವೇ ಹೊರತು, ಸಂಪಾದಿಸುವ ಹಣವಲ್ಲ: ಡಾ. ಮಂಜುಳಾ ರಾವ್ ಉತ್ಕರ್ಷ ೨೦೨೪ ಸಮಾರೋಪ
ಬಂಟ್ವಾಳ: ಜೀವನದಲ್ಲಿ ಸಂಸ್ಕಾರ, ಸಂಸ್ಕೃತಿ, ಮಾನವೀಯತೆ ಮುಖ್ಯವೇ ಹೊರತು, ಸಂಪಾದಿಸುವ ಹಣವಲ್ಲ. ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗದೆ ಉತ್ತಮ ಜೀವನ ಶಿಕ್ಷಣ ನೀಡುವ ವಿದ್ಯಾಲಯಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಛಾ ಅಧ್ಯಕ್ಷೆ ಡಾ. ಮಂಜುಳಾ ರಾವ್ ಹೇಳಿದರು.

ಕಲ್ಲಡ್ಕ ಶ್ರೀರಾಮ ಮಹಾವಿದ್ಯಾಲಯದಲ್ಲಿಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಅಂತರ್ ಕಾಲೇಜು ಮಟ್ಟದ “ಉತ್ಕರ್ಷ” ಫೆಸ್ಟ್ ಶೈಕ್ಷಣಿಕ ಸ್ಪರ್ಧಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಕೌಶಲ್ಯಯುತ ಶಿಕ್ಷಣದೊಂದಿಗೆ ನಾಯಕತ್ವ ಗುಣ ಬೆಳೆಸಿಕೊಳ್ಳುವ ಜೊತೆ ಸಂಸ್ಕಾರಯುತ ಶಿಕ್ಷಣವನ್ನು ಇಲ್ಲಿ ನೀಡಲಾಗುತ್ತಿದೆ ಎಂದರು.
ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿನಿ ಕು. ಮಾನಸಾ ರಾವ್ ಈ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳಿಗೆ ಸರ್ವತೋಮುಖ ಶಿಕ್ಷಣವನ್ನೊದಗಿಸುತ್ತಿದೆ. ಜೀವನದಲ್ಲಿ ಇಂತಹ ಸಮತೋಲನದ ಶಿಕ್ಷಣದಿಂದ ಯಶಸ್ಸು ಖಂಡಿತ ಎಂದರು. ಅಕ್ಷತಾ ಕಾವೂರು, ಆಡಳಿತ ಮಂಡಳಿ ಸದಸ್ಯೆ ಲಕ್ಷ್ಮೀ ರಘುರಾಜ್,
ಉಪಪ್ರಾಂಶುಪಾಲರಾದ ಸುಕನ್ಯಾ ಉಪಸ್ಥಿತರಿದ್ದರು.
ಕಾಲೇಜಿನ ಉಪಪ್ರಾಂಶುಪಾಲ ಯತಿರಾಜ್ ಪೆರಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪೆರ್ನೆ ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.
ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಬಂಟ್ವಾಳ- ಪುತ್ತೂರು ತಾಲೂಕುಗಳ ೯ ಪದವಿಪೂರ್ವ ಕಾಲೇಜುಗಳ ೪೮೬ ವಿದ್ಯಾರ್ಥಿಗಳು ಜನಪದ ನೃತ್ಯ, ಬಲೆ ತೆಲಿಪಾಲೆ, ರಸಪ್ರಶ್ನೆ, ಕಸದಿಂದ ರಸ, ಮೆಹಂದಿ ಇತ್ಯಾದಿ ಒಳಾಂಗಣ ಸ್ಪರ್ಧೆಗಳು ಹಾಗೂ ವಾಲಿಬಾಲ್, ಹಗ್ಗ ಜಗ್ಗಾಟ ಮುಂತಾದ ಹೊರಾಂಗಣ ಸ್ಪರ್ಧೆಗಳು ಸೇರಿದಂತೆ ಒಟ್ಟು ೧೪ ಸ್ಪರ್ಧೆಗಳಲ್ಲಿ ಭಾಗವಹಿಸಿದರು.
ನಂತರ ಗಣಕ ವಿಜ್ಞಾನ ವಿಭಾಗದಲ್ಲಿ ಪ್ರತಿಯೊಬ್ಬರಿಗೂ ತಂತ್ರಜ್ಞಾನದ ಮೂಲಕ ಸ್ಪರ್ಧೆ ಹಾಗೂ ವ್ಯವಸ್ಥೆಗಳ ಬಗ್ಗೆ
ಸ್ಪರ್ಧಾಳುಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ವಿದ್ಯಾರ್ಥಿನಿಯರಾಸ ಕು. ಧನ್ಯಶ್ರೀ ಸ್ವಾಗತಿಸಿ, ಕವನ ವಂದಿಸಿದರು, ಮನ್ವಿತಾ ಕಾರ್ಯಕ್ರಮ ನಿರ್ವಹಿಸಿದರು.