ನ.೧೬ರಿಂದ ನ.೧೭ರವರೆಗೆ ಪುಂಜಾಲಕಟ್ಟೆಯಲ್ಲಿ ಕಬಡ್ಡಿ ಪಂದ್ಯಾಟ
ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ ೪೦ನೇ ವರ್ಷದ ಕಬಡ್ಡಿ ಪಂದ್ಯಾಟ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ “ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ” ವು ನ.೧೬ರಿಂದ ನ.೧೭ರವರೆಗೆ ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪಂದ್ಯಾವಳಿಯಲ್ಲಿ ವಿವಿಧ ಐದು ವಿಭಾಗದಲ್ಲಿ ಪ್ರೊ ಮಾದರಿಯ ಮ್ಯಾಟ್ ಕಬಡ್ಡಿ ನಡೆಯಲಿದೆ. ಪ್ರಾಥಮಿಕ , ಪ್ರೌಢ ಶಾಲಾ ಬಾಲಕ-ಬಾಲಕಿಯರ ವಿಭಾಗ, ಕಾಲೇಜು ವಿಭಾಗ, ಅಂತಾರಾಜ್ಯ ಮಟ್ಟದ ೫೫ ಕೆ.ಜಿ ಹಾಗೂ ೬೫ ಕೆ.ಜಿ. ವಿಭಾಗದ ಪುರುಷರ ಕಬಡ್ಡಿ ಪಂದ್ಯಾಟ ನಡೆಯಲಿದೆ. ಕೆ.ಜಿ ವಿಭಾಗದ ಪ್ರಥಮ ಸ್ಥಾನ ವಿಜೇತ ತಂಡದ ಆಟಗಾರರಿಗೆ ಚಿನ್ನದ ಪದಕ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಹಾಗೂ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.