ಬಂಟ್ವಾಳ: ಶಾಲೆ ಮಕ್ಕಳಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿ, ವಿದ್ಯಾರ್ಥಿಗಳಿಬ್ಬರು ಗಂಭೀರ
ಶಾಲೆ ಮಕ್ಕಳಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ಅಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಶಾಲೆ ಮಕ್ಕಳು ಕೂಡ ಕಾರಿ ಅಡಿಗೆ ಬೀಳುತ್ತಿದ್ದರು. ಆದರೆ ಸ್ವಲ್ಪದರಲ್ಲೇ ಅವರು ಪಾರಾಗಿದ್ದಾರೆ. ಇನ್ನು ಕಾರಿನಲ್ಲಿದ್ದ ಮಕ್ಕಳನ್ನು ಅಲ್ಲಿ ಅಲ್ಲಿದ್ದ ಸಾರ್ವಜನಿಕರು ಕಾಪಾಡಿದ್ದಾರೆ. ತಕ್ಷಣವೇ ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದಾರೆ.
ಇಳಿಜಾರಿನಲ್ಲಿ ನಿಯಂತ್ರಣ ಕಳೆದುಕೊಂಡು ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಮತ್ತು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಕಾರಿನಲ್ಲಿದ್ದ ಉಳಿದ ಎಂಟು ಮಕ್ಕಳಿಗೆ ಸಣ್ಣಪುಟ್ಟ ಗಾಯಗಾಲಾಗಿವೆ. ಬಂಟ್ವಾಳ ತಾಲೂಕಿನ ಪೆರುವಾಯಿ ಮುಚ್ಚಿಲಪದವು ಎಂಬಲ್ಲಿಈ ಘಟನೆ ನಡೆದಿದೆ. ಗಾಯಗೊಂಡ ಮಕ್ಕಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.