ವಿಜಯಪುರ: ನಾನು ಆಗಿದ್ದರೆ ಸಿಎಂ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದೆ ಎಂದು ಸ್ವಾಮೀಜಿ
ಪಂಚಮಸಾಲಿ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿಯ ಹಿರೇಮಠದ ಶ್ರೀ ಅಭಿನವ ಸಂಗನಬಸವ ಸ್ವಾಮೀಜಿ ವಾಗ್ದಾಳಿ ನಡೆಸಿದ್ದಾರೆ. ಸಿಎಂನ್ನು ಲಫಂಗ ಎಂದು ಹೇಳಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿಯ ಹಿರೇಮಠದ ಶ್ರೀ ಅಭಿನವ ಸಂಗನಬಸವ ಸ್ವಾಮೀಜಿಯಿಂದ ಸಿಎಂಗೆ ಅವಾಚ್ಯ ಶಬ್ದಗಳಿಂದ ವಾಗ್ದಾಳಿ ನಡೆಸಿದ್ದಾರೆ. ಪಂಚಮಸಾಲಿ ಮೀಸಲಾತಿಯ ವಿಚಾರದಲ್ಲಿ ಲಫಂಗ ಸಿಎಂ ಸಿದ್ದರಾಮಯ್ಯ ಮೀಸಲಾತಿ ನೀಡಲ್ಲ ಎಂದು ಶ್ರೀಗಳಿಗೆ ಹೇಳಿದ್ದೆ ಎಂದು ಹೇಳಿದರು. ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಶ್ರೀಗಳ ಹೆಗಲ ಮೇಲೆ ಸಿದ್ದರಾಮಯ್ಯ ಹಾಕಿದ್ದರು ನಾನು ಆಗಿದ್ದರೆ ಸಿಎಂ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದೆ ಆದರೆ, ಶ್ರೀಗಳು ಸುಮ್ಮನೆ ಇದ್ದರು ಎಂದು ಏಕ ವಚನದಲ್ಲಿ ಸ್ವಾಮೀಜಿ ಹೇಳಿದರು.
ಸಂಸದ, ಶಾಸಕ, ಸಚಿವರ ವಿರುದ್ದವೂ ಸ್ವಾಮೀಜಿ ವಾಗ್ದಾಳಿ ಮಾಡಿದ್ದಾರೆ, ಅವರು ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ. ಕಿತ್ತೂರು ರಾಣಿ ಚನ್ನಮ್ಮ ಯುವಕ ಸಂಘ ಹಾಗೂ ಕೊಲ್ಹಾರ ತಾಲ್ಲೂಕು ಪಂಚಮಸಾಲಿ ಸಮಾಜವತಿಯಿಂದ ಹಮ್ಮಿಕೊಂಡಿದ ಕಿತ್ತೂರ ರಾಣಿ ಚನ್ನಮ್ಮನ 246ನೇ ಜಯಂತ್ಯೋತ್ಸವ ಹಾಗೂ 200ನೇ ವಿಜಯೋತ್ಸವ ಸಮಾರಂಭದಲ್ಲಿ ಭಾಷಣದಲ್ಲಿ ಸಿಎಂಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಪಂಚಮಸಾಲಿ 2ಎ ಮೀಸಲಾತಿಯಲ್ಲಿ ಸಿಎಂ ಸಿದ್ದರಾಮಯ್ಯ ನಾಟಕ ಮಾಡಿಕೊಂಡು ಹೋಗುತ್ತಿದ್ದಾರೆ
ಸಿಎಂ ಸಿದ್ದರಾಮಯ್ಯ ಮೀಸಲಾತಿ ನೀಡಲ್ಲ, ಬೇರೆ ಯಾರಾದರೂ ಸಿಎಂ ಆದಾಗ ಪಂಚಮಸಾಲಿ 2ಎ ಮೀಸಲಾತಿ ಸಿಗಬಹುದು ಎಂಬ ಹೇಳಿಕೆಯನ್ನು ನೀಡಿದ್ದಾರೆ. ನಂತರ ಸ್ವಾಮೀಜಿ ಮಾತಿಗೆ ವ್ಯಾಪಕ ವಿರೋಧ ಕೂಡ ವ್ಯಕ್ತವಾಗಿದೆ. ಈ ಹೇಳಿಕೆಯ ನಂತರ ಸಾಮಾಜಿಕ ಜಾಲ ತಾಣಗಳಲ್ಲಿ ಸ್ವಾಮೀಜಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಸ್ವಾಮೀಜಿ ವಿಡಿಯೊ ಬೈಟ್ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ. ಮಾತಿನ ಭರದದಲ್ಲಿ ಸಿಎಂ ವಿರುದ್ದ ಮಾತನಾಡಿದೆ ಅವರ ಸ್ಥಾನಮಾನಕ್ಕೆ ಅವಮಾನ ಮಾಡಿದೆ. ಅದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದೇನೆಂದು ಹೇಳಿದ್ದಾರೆ.