ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ
ಬಂಟ್ವಾಳ: ಪೆರಾಜೆ ಗ್ರಾಮದ ಬುಡೋಳಿ ಅಂಗನವಾಡಿ ಕೇಂದ್ರದಲ್ಲಿ ಗುರುವಾರ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಯಶೋಧ,ಸ್ಥಳೀಯ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಶಿಕುಮಾರಿ ಬಾಲವಿಕಾಸ ಸಮಿತಿಯ ಸದಸ್ಯ ಕುಶಾಲಪ್ಪ ಗೌಡ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಕ್ಕಳ ತಾಯಂದಿರು ಹಾಗೂ ಸ್ತ್ರೀ ಶಕ್ತಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ವಿವಿಧ ಸ್ಪರ್ಧೆಯ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.