ಬಂಟ್ವಾಳ:ಕಸಾಯಿಖಾನೆಗೆ ಟೆಂಪೋವೊಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದರೆನ್ನಲಾದ ಆರೋಪಿಗಳನ್ನು ಜಾನುವಾರು ಸಹಿತ ಬಂಧಿಸಿದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಮುಂಜಾನೆ ನಡೆದಿದೆ.

ಬಂಧಿತ ಆರೋಪಿಗಳನ್ನು ಉಳ್ಳಾಲದ ಮೊಹಮ್ಮದ್ ಪೊಡಿಮೋನು ಯಾನೆ ಸಿದ್ಧಿಕ್, ಅನಿಶ್, ಮತ್ತು ಮಹಮ್ಮದ್ ಹನೀಫ್ ಎಂದು ಗುರುತಿಸಲಾಗಿದೆ. ಇವರು ಟೆಂಪೋ ಮೂಲಕ ಒಟ್ಟು ಎಂಟು ದನಗಳನ್ನು ಅಮಾನುಷವಾಗಿ ತುಂಬಿಕೊಂಡು ಬೆಳ್ತಂಗಡಿ ಕಡೆಯಿಂದ ಉಳ್ಳಾಲ ಕಸಾಯಿಖಾನೆಗೆ ಸಾಗಿಸುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ಎಎಸ್ಪಿ ರಾಹುಲ್ ಕುಮಾರ್ ನೇತೃತ್ವದಲ್ಲಿ ಪುಂಜಾಲಕಟ್ಟೆ ಪೊಲೀಸರು ವಗ್ಗ-ಮೂಜರ್ೆ ನಡುವಿನ ಕಾವಳಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಕಾಯರ್ಾಚರಣೆ ನಡೆಸಿ ಟೆಂಪೋ ತಡೆದು ನಿಲ್ಲಿಸಿ ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *