ಬಂಟ್ವಾಳ: ಮೊಡಂಕಾಪು ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಹರಿಪ್ರಿಯಾ ಅಥ್ಲೆಟಿಕ್ ದ್ವಿತೀಯ, ರಾಷ್ಟ್ರಮಟ್ಟಕ್ಕೆ ಆಯ್ಕೆ
ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಕುಮಾರಿ ಹರಿಪ್ರಿಯಾ ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ, ಕೋಲಾರ ಜಿಲ್ಲೆಯ ಆಶ್ರಯದಲ್ಲಿ ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೊಡಂಕಾಪು,ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ಹರಿಪ್ರಿಯಾ, ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇನ್ನು ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಸಂಚಾಲಕ ವಲೇರಿಯನ್ ಡಿಸೋಜಾರವರು, ಶಾಲಾ ಮುಖ್ಯೋಪಾಧ್ಯಾಯ ಮೆಲ್ವಿನ್ ಲೋಬೊರವರು, ಶಿಕ್ಷಕ ಮತ್ತು ರಕ್ಷಕ ಸಂಘದ ಸಮಿತಿಯ ಸದಸ್ಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.