ಮಿನಿ ಒಲಂಪಿಕ್ಸ್ ನ ಜೂಡೋ ಸ್ಫರ್ಧೆಯಲ್ಲಿ ಹಂಸಿಕಾಗೆ ಕಂಚಿನ ಪದಕ
ಬಂಟ್ವಾಳ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕದ ಮೂರನೇ ಮಿನಿ ಒಲಂಪಿಕ್ ಕ್ರೀಡಾಕೂಟದಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜೂಡೋ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಪೊಳಲಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಹಂಸಿಕಾ ಕಂಚಿನ ಪದಕದೊಂದಿಗೆ ತೃತೀಯ ಸ್ಥಾನವನ್ನು ಗೆದ್ದುಕೊಂಡಿದ್ದಾರೆ.
ಪೊಳಲಿಯ ಸರ್ವಮಂಗಳ ಸಭಾಂಗಣದಲ್ಲಿ ಜೂಡೋ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ. ವಿದ್ಯಾವಿಲಾಸ ಶಾಲೆಯಾಡಳಿತ ಮಂಡಳಿಯ ಸುಬ್ರಾಯ ಕಾರಂತ್, ಪೊಳಲಿ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯಂತ್ ಆಚಾರ್ಯ ಸಹಕರಿಸಿದ್ದಾರೆ.