ʼಜಲ ಜೀವನ್ ಮಿಷನ್ʼ ಯೋಜನೆ ಬಗ್ಗೆ ತಿಳಿಸಲು ಕರಿಯಂಗಳ ಗ್ರಾಮ ಪಂಚಾಯತ್ ವತಿಯಿಂದ ಬೀದಿ ನಾಟಕ

ಪೊಳಲಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಕರಿಯಂಗಳ ಗ್ರಾಮ ಪಂಚಾಯತ್ ವತಿಯಿಂದ ಜಲ ಜೀವನ್ ಮಿಷನ್ ಯೋಜನೆಯ ಬಗ್ಗೆ ಹಾಗೂ ಜಲ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಲು ಪೊಳಲಿಯಲ್ಲಿ ಬೀದಿ ನಾಟಕವನ್ನು ಏರ್ಪಡಿಸಲಾಗಿತ್ತು.

ದಕ್ಷಿಣ ಜಿಲ್ಲಾಪಂಚಾಯತ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಐಇಸಿ ಚರಣ್ ʼಬೀದಿ ನಾಟಕದ ಮುಖಾಂತರ ಜಲ ಜೀವನ ಮಿಷನ್ ಯೋಜನೆ ಮತ್ತು ಇದರ ಉದ್ದೇಶದ ಬಗ್ಗೆ ಜನರಿಗೆ ಮಾಹಿತಿ ಕೊಡುವಂತಹ ಕಾರ್ಯವನ್ನು ಮಾಡುತ್ತಿದ್ದೇವೆ. ಜೊತೆಗೆ ಜಲ ಸಂರಕ್ಷಣೆಯ ಬಗ್ಗೆಯೂ ಅರಿವು ಮೂಡಿಸುವ ಕೆಲಸವನ್ನು ಜಿಲ್ಲಾ ಪಂಚಾಯತ್ ವತಿಯಿಂದ ಮಾಡುತ್ತಿದ್ದೇವೆ ಎಂದರು.

ಈ ಕಾರ್ಯಕ್ರಮದಲ್ಲಿ ಕರಿಯಂಗಳ ಗ್ರಾ. ಪo. ಅಧ್ಯಕ್ಷೆ ರಾಧಾ ಲೋಕೇಶ್, ಉಪಾಧ್ಯಕ್ಷ ರಾಜು ಕೋಟ್ಯಾನ್, ಮಾಜಿ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ, ಮಾಜಿ ಅಧ್ಯಕ್ಷೆ ಚಂದ್ರಾವತಿ ಪೊಳಲಿ, ಪಿಡಿಒ ವಸಂತಿ ಹಾಗೂ ಪಂಚಾಯತ್ ಸದಸ್ಯರು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು