ಡಿಸಿಎಂ ಡಿಕೆ ಶಿವಕುಮಾರ್ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ

ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದಿದ್ದಾರೆ. ಈಗಾಗಲೇ ಮೂರು ಕ್ಷೇತ್ರಗಳಿಗೆ ನಡೆದಿರುವ ಉಪಚುನಾವಣೆಗೆ ಸಂಬಂಧಿಸಿದಂತೆ ಗೆಲುವು ನಮ್ಮದಾಗಬೇಕು ಎಂಬ ಕಾರಣಕ್ಕೆ ದೇವರು ಮುಂದೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಬೈಂದೂರಿಗೆ ಬಂದಿಳಿದಿದ್ದಾರೆ. ಸಚಿವ ಮಾಂಕಾಳು ವೈದ್ಯ, ಮಾಜಿ ಶಾಸಕ ಗೋಪಾಲ ಪೂಜಾರಿ, ಉದ್ಯಮಿ ಬಿ.ಬಿ ಶೆಟ್ಟಿ ಕೂಡ ಇವರ ಜತೆಗೆ ಇದ್ದರು.
ಕೊಲ್ಲೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ವಿಚಾರವಾಗಿ ಮಾತನಾಡಿದ್ದಾರೆ. ನಾನು ದೇವರ ಸನ್ನಿಧಿಯಲ್ಲಿ ಹೇಳುತ್ತಿದ್ದೇನೆ. ಸರ್ಕಾರದ ಪ್ರತಿನಿಧಿಯಾಗಿ ಹೇಳುತ್ತಿದ್ದೇನೆ, ಉಪಮುಖ್ಯಮಂತ್ರಿಯಾಗಿ ಹೇಳುತ್ತಿದ್ದೇನೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಹೇಳುತ್ತೇನೆ, ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ನಮ್ಮ ಸರ್ಕಾರ ಮತ್ತು ನಮ್ಮ ಪಕ್ಷ ಅನ್ಯಾಯ ಮಾಡಲ್ಲ, ರದ್ದುಗೊಳಿಸುವ ಫಲಾನುಭವಿಗಳ ಪಟ್ಟಿ ನೀಡಲು ಹೇಳಿದ್ದೇವೆ. ಎಲ್ಲರಿಂದ ಮರು ಅರ್ಜಿ ಪಡೆಯುತ್ತೇವೆ. ಐದು ಗ್ಯಾರಂಟಿ ಜಾರಿ ನೋಡಿಕೊಳ್ಳಲು ತಾಲೂಕು ಸಮಿತಿಗಳಿವೆ. ರಾಜ್ಯಮಟ್ಟದ ಸಮಿತಿ ಕೂಡ ಇದೆ. ಅವರು ಉಸ್ತುವಾರಿ ಮಾಡಿ ನ್ಯಾಯ ಕೊಡುತ್ತದೆ. ಯಾರು ಭಯಪಡಬೇಕಾಗಿಲ್ಲ ಎಂದು ಹೇಳಿದ್ದಾರೆ.