ಬಂಟ್ವಾಳ: ಇಂದಿರಾ ಗಾಂಧಿ ಜನ್ಮದಿನದ ಪ್ರಯುಕ್ತ ಕನ್ಯಾನ ಭಾರತ್ ಸೇವಾಶ್ರಮಕ್ಕೆ ಸಹಾಯ ಹಸ್ತ ನೀಡಿದ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್
ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆಯನ್ನು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಜನ್ಮದಿನಾಚರಣೆಯ ಪ್ರಯುಕ್ತ ಮಾಜಿ ಸಚಿವರಾದ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಕನ್ಯಾನ ಭಾರತ್ ಸೇವಾಶ್ರಮಕ್ಕೆ ದಿನಬಳಕೆ ಸಾಮಗ್ರಿಯನ್ನು ಹಾಗೂ ಆರ್ಥಿಕ ಸಹಾಯವನ್ನು ಹಸ್ತಾಂತರಿಸಲಾಯಿತು.
ಈ ವೇಳೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಚಂದ್ರಶೇಖರ್ ಭಂಡಾರಿ,ಬಂಟ್ವಾಳ ಪುರಸಭಾಧ್ಯಕ್ಷ ವಾಸು ಪೂಜಾರಿ,ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಪಕ್ಷದ ಮುಖಂಡರಾದ
ಸಂಜೀವ ಪೂಜಾರಿ ಬಿರ್ವ,ಅಬ್ಬಾಸ್ ಆಲಿ, ,ಚಿತ್ತರಂಜನ್ ಶೆಟ್ಟಿ, ಐಡಾ ಸುರೇಶ್, ಮಲ್ಲಿಕಾ ಶೆಟ್ಟಿ, ಜೋಸ್ಪಿನ್ ಡಿ.ಸೋಜಾ , ಪೌಝಿಯಾ, ಮಂಜುಳಾ ಕುಶಾಲ ಪೆರಾಜೆ, ರೇಷ್ಮಾ ಟೆಲ್ಲಿಸ್, ಶೈಲಜಾ ರಾಜೇಶ್, ಆಯಿಚಾ, ಆಶಿಫಾ, ವಸಂತಿ ನೆಟ್ಲ, ಮೊದಲಾದವರು ಉಪಸ್ಥಿತರಿದ್ದರು. ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ ನಾಯಕರನ್ನು ಸ್ವಾಗತಿಸಿ, ಪ್ರಸ್ತಾವನೆಗೈದರು.