Published On: Sat, Nov 23rd, 2024

ಸಂಡೂರು: ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಗೆಲುವು

ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ. 2023ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಇ ತುಕಾರಾಂ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಆದರೆ, 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಇ ತುಕಾರಾಂ ಅವರು ಲೋಕಸಭೆಗೆ ಸ್ಪರ್ಧಿಸಿ ಗೆಲವು ಸಾಧಿಸಿದರು. ಬಳಿಕ, ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದರು.

ಹೀಗಾಗಿ, ತೆರುವಾಗಿದ್ದ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ಕಾಂಗ್ರೆಸ್​ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರಿಗೆ ವಿಜಯಲಕ್ಷ್ಮಿ ಒಲೆದಿದ್ದಾಳೆ. ಇನ್ನು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಆಪ್ತ, ಪಕ್ಷಕ್ಕೆ ನಿಷ್ಠಾವಂತನಾಗಿರುವ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter